ದಾವಣಗೆರೆ : ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಹೇಳಿದ್ದಾರೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಹರಿಬಿಟ್ಟಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್ಗೆ ನಾಯಕರಿಗೆ ಸವಾಲು ಹಾಕಿದ್ದಾರೆ.
ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು ನಾನಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದಿದ್ದಾರೆ. ಅಲ್ಲದೆ ಅಹಿಂದ ಸಮುದಾಯಕ್ಕೆ ಟಿಕೆಟ್ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದರಿಂದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ರಂಗೇರುವಂತೆ ಮಾಡಿದ್ದು, ಕಾಂಗ್ರೇಸ್ ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲೀಂ ಸಮುದಾಯದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ನಡೆದಿದ್ದು ನಾಳೆ ನಾಮಪತ್ರ ವಾಪಸ್ಗೆ ಅವಕಾಶವಿದ್ದು ಕಾಂಗ್ರೆಸ್ ನಾಯಕರು ಬಂಡಾಯ ಶಮನಕ್ಕೆ ಕಸರತ್ತು ನಡೆಸುತ್ತಿದ್ದಾರೆ.



