Friday, April 4, 2025
Google search engine

HomeUncategorizedರಾಷ್ಟ್ರೀಯಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

ಬ್ಯಾಂಕ್‌ಗೆ ಸಾಲ ಮರು ಪಾವತಿಸದ ಹಿನ್ನೆಲೆ ವಾರೆಂಟ್ ಜಾರಿ ಮಾಡಲಾಗಿದೆ. ವಿಜಯ್ ಮಲ್ಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ ಲೋನ್ ಪಡೆದಿದ್ದು, ಸಾಲ ಮರುಪಾವತಿ ಮಾಡಿಲ್ಲ. ಮಲ್ಯ 2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ ಪಡೆದಿದ್ದರು.

ಪ್ರಕರಣದಲ್ಲಿ ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೀಗ ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಬಾಕಿ ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular