Tuesday, April 28, 2026
Google search engine

Homeರಾಜಕೀಯಹೆಸರಿನಲ್ಲಿ ಅಹಿಂಸೆ, ಆದರೆ ಪ್ರತಿಯೊಂದು ಮಾತು ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ: ನಟ ಚೇತನ್‌ಗೆ ನಿಖಿಲ್...

ಹೆಸರಿನಲ್ಲಿ ಅಹಿಂಸೆ, ಆದರೆ ಪ್ರತಿಯೊಂದು ಮಾತು ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು : ಡಾ. ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ. ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ. “ಹೆಸರಿನಲ್ಲಿ ಅಹಿಂಸೆ ಇರಬಹುದು, ಆದರೆ ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ” ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಟ ಚೇತನ್ ಅಹಿಂಸಾ ಅವರಿಗೆ ತಿರುಗೇಟು ನೀಡಿದ್ದಾರೆ.

ಡಾ. ರಾಜ್‌ಕುಮಾರ್ ಕುರಿತು ಚೇತನ್ ಮಾಡಿದ್ದ ಪೋಸ್ಟ್‌ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ನಿಖಿಲ್, “ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ವ್ಯಕ್ತಿತ್ವದ ಬಗ್ಗೆ ಟೀಕಿಸುವ ಮೊದಲು ಇತಿಹಾಸ ತಿಳಿದುಕೊಳ್ಳಿ” ಎಂದು ಸಲಹೆ ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜವಾದರೂ, ಅವುಗಳಿಗೆ ಒಂದು ಘನತೆ ಇರಬೇಕು ಎಂದು ಅವರು ಹೇಳಿದರು.

ನಮ್ಮ ಕುಟುಂಬದ ಮೇಲಿನ ವೈಯಕ್ತಿಕ ದಾಳಿ ಅಥವಾ ಸೋಲು-ಗೆಲುವಿನ ಮಾತುಗಳನ್ನು ನಾವು ಸದಾ ವಿನಮ್ರತೆಯಿಂದಲೇ ಸ್ವೀಕರಿಸುತ್ತೇವೆ. ಆದರೆ ಸಮಾಜದಲ್ಲಿ ದ್ವೇಷ ಬಿತ್ತುವ ಹೇಳಿಕೆಗಳು ಒಪ್ಪಲಾಗುವುದಿಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದರು. ಪ್ರಜಾಪ್ರಭುತ್ವದಲ್ಲಿ ಅಂತಿಮ ತೀರ್ಪುಗಾರರು ಜನರೇ ಹೊರತು, ವೈಯಕ್ತಿಕ ದ್ವೇಷ ಹುಟ್ಟುಹಾಕುವವರು ಅಲ್ಲ ಎಂದರು.

ಸ್ಮಾರಕದ ಜಾಗದ ವಿಚಾರವಾಗಿ ಚೇತನ್ ಎತ್ತಿದ ಆಕ್ಷೇಪಕ್ಕೂ ನಿಖಿಲ್ ಪ್ರತಿಕ್ರಿಯಿಸಿ, “ಅಣ್ಣಾವ್ರ ಬಗ್ಗೆ ಮಾತನಾಡಲು ಯೋಗ್ಯತೆ ಬೇಕು” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಚೇತನ್, “ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಮಾತನಾಡಲು ಯೋಗ್ಯರು, ಆದರೆ ಮಾತಿನ ತೂಕವನ್ನು ಜನರೇ ತೀರ್ಮಾನಿಸುತ್ತಾರೆ” ಎಂದು ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular