Friday, April 4, 2025
Google search engine

Homeರಾಜಕೀಯಪಕ್ಷದ ಯಾವೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಿಲ್ಲ-ಟಿ.ಎಸ್ ಶ್ರೀವತ್ಸ

ಪಕ್ಷದ ಯಾವೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಿಲ್ಲ-ಟಿ.ಎಸ್ ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ಮುನ್ನೆಲೆಗೆ ಬಂದಿರುವ ವಿಷಯವಾಗಿ ಮೈಸೂರಿನಲ್ಲಿ ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಪ್ರತಿಕ್ರಿಯಿಸಿ, ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ರೀತಿಯ ಬೆಳವಣಿಗೆ ಆಗುತ್ತಿದೆ ಎಂದು ತಿಳಿದುಕೊಂಡಿದ್ದೇನೆ. ನಮ್ಮ ಪಕ್ಷದ ಯಾವೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಿಲ್ಲ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹಾಲಿ ಶಾಸಕ ಎಸ್ ಟಿ ಸೋಮಶೇಖರ್ ಜೊತೆಯೂ ಈ ಬಗ್ಗೆ ಮಾತನಾಡಿದೆ‌.ಪಕ್ಷ ತೊರೆಯುವ ಉದ್ದೇಶವಿಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ. ಹೆಚ್ ವಿ ರಾಜೀವ್ ರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ. ರಾಜೀವ್ ಅವರು ಪಕ್ಷದ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಅವರು ಮುಡಾ ಅಧ್ಯಕ್ಷರಾಗಿದ್ದರು. ಪಕ್ಷ ಅವರಿಗೆ ಎಲ್ಲವನ್ನು ಕೊಟ್ಟಿದೆ.
ಹೀಗಾಗಿ ರಾಜೀವ್ ಅವರು ಪಕ್ಷ ತೊರೆಯುವ ಸಾಧ್ಯತೆ ಕಡಿಮೆ‌. ಮಹಾನಗರ ಪಾಲಿಕೆ ಚುನಾವಣೆ ಯಾವಾಗ ನಡೆದರೂ ಎದುರಿಸಲು ಸಿದ್ದರಿದ್ದೇವೆ. ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗು ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡಲಾಗುವುದು ಎಂದು ಹೇಳಿದರು. ಕೃಷ್ಣರಾಜ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವ ವಿಚಾರವಾಗಿ ಮಾತನಾಡಿ ಕಪಿಲಾ ನದಿಯಿಂದ ನೀರೆತ್ತುವ ಸ್ಥಳದಲ್ಲಿ ತಾಂತ್ರಿಕ ಸಮಸ್ಯೆಯಾಗಿತ್ತು.ಪರಿಣಾಮ ಕಳೆದ ನಾಲ್ಕು ದಿನಗಳಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.
ಇದೀಗ ಸಮಸ್ಯೆ ಬಗೆಹರಿದಿದೆ‌, ಇಂದು ಸಂಜೆಯೊಳಗೆ ಎಲ್ಲಾ ಕಡೆಗೂ ಕುಡಿಯುವ ನೀರು ಪೂರೈಕೆಯಾಗಲಿದೆ‌ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular