Saturday, April 19, 2025
Google search engine

Homeರಾಜಕೀಯಜನ ಅಷ್ಟೇ ಅಲ್ಲ ಜಾನುವಾರುಗಳೂ ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ: ಬಿ.ವೈ ವಿಜಯೇಂದ್ರ

ಜನ ಅಷ್ಟೇ ಅಲ್ಲ ಜಾನುವಾರುಗಳೂ ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ: ಬಿ.ವೈ ವಿಜಯೇಂದ್ರ

ಬೆಂಗಳೂರು: ಜನ ಅಷ್ಟೇ ಅಲ್ಲ ಜಾನುವಾರುಗಳೂ ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡಲಿ. ಇಲ್ಲದಿದ್ದರೆ ರೈತರ ಹಣ ಬಾಕಿ ಉಳಿಸಿಕೊಂಡ ಪಾಪ ಸರ್ಕಾರಕ್ಕೆ ತಗಲುತ್ತದೆ. ಹಣ ಬಿಡುಗಡೆ ಮಾಡದಿದ್ದರೆ ಜನ ಮತ್ತು ಜಾನುವಾರುಗಳೊಂದಿಗೆ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಹಣ ಬಾಕಿ ಉಳಿಸಿಕೊಂಡಿದ್ದರಿಂದ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಬಿ ಎಸ್​ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಹೀಗಾಗಿ ಆಗ ಪ್ರತಿ ನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈಗ ಕಾಂಗ್ರೆಸ್​ ಸರ್ಕಾರ 716 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆ ಆಗಿದೆ ಎಂದರು.

ಬಿಎಸ್​ ಯಡಿಯೂರಪ್ಪ ಅವರ ಕೃಪಾಕಟಾಕ್ಷದಿಂದ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಿದ್ದಾರೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜನರೇ ಉತ್ತರಿಸುತ್ತಾರೆ ಅಮಿತ್ ಶಾ ರಾಜ್ಯಕ್ಕೆ ಬರುವ ವಿಚಾರವಾಗಿ ಮಾತನಾಡಿದ ಅವರು ಅಮಿತ್ ಶಾ ಅವರು ಇದೇ ತಿಂಗಳು 10ಕ್ಕೆ ಬೆಂಗಳೂರಿಗೆ ಬರುತ್ತಿದ್ದಾರೆ. ಲೋಕಸಭಾ ಕ್ಲಸ್ಟರ್ ಮೀಟಿಂಗ್ ಮಾಡಲಿದ್ದೇವೆ. ಚರ್ಚೆ ಮಾಡಿ, ತದನಂತರ ಲೋಕಸಭಾ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಲಿದ್ದಾರೆ ಎಂದರು.

ಮಂಡ್ಯ, ಹಾಸನ ಕ್ಷೇತ್ರ ಕುರಿತು ಪ್ರೀತಂಗೌಡ ಹೇಳಿಕೆ, ಚಿಕ್ಕಬಳ್ಳಾಪುರದಲ್ಲಿ ಕೆ. ಸುಧಾಕರ್ ಸ್ಫರ್ಧೆ ವಿಚಾರವಾಗಿ ಮಾತನಾಡಿದ ಅವರು, ಎಲ್ಲಾ ಕೂತು ಚರ್ಚೆ ಮಾಡುತ್ತೇವೆ. ಗೊಂದಲ ಇಲ್ಲ, ಎಲ್ಲರ ಜತೆ ಚರ್ಚಿಸಿ ಕ್ಷೇತ್ರ ಹಂಚಿಕೆ ಆಗಲಿದೆ. ಯಾರು ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಆಗಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡಲಿದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular