Tuesday, January 20, 2026
Google search engine

Homeರಾಜ್ಯಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಯಲ್ಲೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ : ಜಿ.ಪರಮೇಶ್ವರ್

ಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಯಲ್ಲೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ : ಜಿ.ಪರಮೇಶ್ವರ್

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಡಿಜಿಪಿ ರಾಮಚಂದ್ರ ರಾವ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಚಿತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ತನಿಖೆಯ ನಂತರ ಏನು ಬೇಕಾದರೂ ಆಗಬಹುದು. ಅವರನ್ನು ವಜಾಗೊಳಿಸಬಹುದು. ತಕ್ಷಣ ಕ್ರಮ ಕೈಗೊಳ್ಳಬೇಕಾಗಿದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಅವರು ಹಿರಿಯ ಅಧಿಕಾರಿ ಎಂಬ ಅಂಶವನ್ನು ನೋಡದೆ, ಯಾವುದೇ ಹಿಂಜರಿಕೆಯಿಲ್ಲದೆ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ.

ಮುಂದುವರೆದು ತನಿಖೆಯಲ್ಲಿ ಏನಾಗುತ್ತದೆ ಎಂಬುದನ್ನು ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಕೂಡ ಅಸಮಾಧಾನಗೊಂಡಿದ್ದಾರೆ, ನನಗೂ ಅಸಮಾಧಾನವಿದೆ. ಇದು ಪೊಲೀಸ್ ಇಲಾಖೆಯಾಗಿರುವುದರಿಂದ ಖಂಡಿತಾ ಇಂತಹ ಕ್ರಮ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

ನಿನ್ನೆ ವಿಡಿಯೊ ವೈರಲ್ ಆದ ಬೆನ್ನಲ್ಲೇ ತಮ್ಮನ್ನು ಭೇಟಿ ಮಾಡಲು ರಾಮಚಂದ್ರ ರಾವ್ ಬಂದಿದ್ದರು ಎಂದು ಆಮೇಲೆ ಗೊತ್ತಾಯಿತು. ಆದರೆ ಇಂತಹ ಪರಿಸ್ಥಿತಿಯಲ್ಲಿ ನಾನು ಖಂಡಿತಾ ಅವರನ್ನು ಭೇಟಿ ಮಾಡುತ್ತಿರಲಿಲ್ಲ. ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿ ಇಂತಹ ನೀಚ ಕೆಲಸ ಮಾಡಿದ್ದರೆ ಅದನ್ನು ಖಂಡಿತಾ ಕ್ಷಮಿಸಲು ಸಾಧ್ಯವಿಲ್ಲ ಎಂದರು.

ಈ ವೇಳೆ ವೈರಲ್ ವಿಡಿಯೊದಲ್ಲಿ ರಾಮಚಂದ್ರ ರಾವ್ ಅವರ ಸಂಪರ್ಕದಲ್ಲಿದ್ದ ಮಹಿಳೆಯರು ಯಾರು ಎಂದು ಇದುವರೆಗೆ ಗೊತ್ತಾಗಿಲ್ಲ, ಯಾರೂ ಇದುವರೆಗೆ ದೂರು ನೀಡಿಲ್ಲ. ಆ ಬಗ್ಗೆ ಕೂಡ ತನಿಖೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವರು ಹೇಳಿದರು.

RELATED ARTICLES
- Advertisment -
Google search engine

Most Popular