ರಾಮನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸೆ.೧೫ರಂದು ಜಿಲ್ಲೆಯಲ್ಲಿಹೆಜ್ಜಾಲ ದಿಂದ ಕೋಲೂರು ಗೇಟ್‌ರವರೆಗೆ ಮಾನವ ಸರಪಳಿ ರಚಿಸಲು ಅಗತ್ಯ ಸಿದ್ದತೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸೂಚನೆ ನೀಡಿದರು.
ಅವರು ಸೆ. ೩ರ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಮಾನವ ಸರಪಳಿ ರಚನೆ ಕಾರ್ಯಕ್ರಮ ಸೆ. ೧೫ರಂದು ಬೆಳಿಗ್ಗೆ ೮.೩೦ ರಿಂದ ೧೦.೩೦ರ ವರೆಗೆ ರಾಜ್ಯದ ಎಲ್ಲಾ ೩೧ ಜಿಲ್ಲೆಗಳಲ್ಲಿಯೂ ಏಕಕಾಲದಲ್ಲಿ ನಡೆಯಲಿದೆ ಎಂದು ತಿಳಿಸಿದರು. ರಾಮನಗರ ಜಿಲ್ಲೆಯಲ್ಲಿ ಬಿಡದಿ ತಾಲ್ಲೂಕಿನ ಹೆಜ್ಜಾಲ ದಿಂದ ಪ್ರಾರಂಭಗೊಂಡು ಚನ್ನಪಟ್ಟಣ ತಾಲ್ಲೂಕು ಕೋಲೂರು ಗೇಟ್ ಗಡಿಯವರೆಗೆ ಮಾನವ ಸರಪಳಿ ನಡೆಯಲಿದೆ. ಈ ಕಾರ್ಯಕ್ರದಲ್ಲಿ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಲು ಸೂಚಿಸಿದರು ಹಾಗೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜು ಸೇರಿದಂತೆಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ತಿಳಿಸಿದರು.
ಮಾನವ ಸರಪಳಿ ರೂಟ್‌ನಲ್ಲಿ ಬರುವ ಅಕ್ಕಪಕ್ಕದ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳು ಹಾಜರಾಗಲು ಕ್ರಮ ವಹಿಸುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ತಹಶೀಲ್ದಾರ್ ತೇಜಸ್ವಿನಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಡಿಡಿಪಿಐಬಸವರಾಜೇಗೌಡ, ಡಿಡಿಪಿಯು ನಾಗಮ್ಮ ಸೇರಿದಂತೆಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.