ಬೆಳಗಾವಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಸಚಿವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣ ಗೊಳಿಸಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು. ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ ? ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ . ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದರು.