Friday, April 18, 2025
Google search engine

Homeಸ್ಥಳೀಯಶಾಂತಿಯುತ ಬಕ್ರೀದ್ ಆಚರಣೆ ಸೂಚನೆ

ಶಾಂತಿಯುತ ಬಕ್ರೀದ್ ಆಚರಣೆ ಸೂಚನೆ

ಗುಂಡ್ಲುಪೇಟೆ: ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡುವಂತೆ ಡಿವೈಎಸ್ಪಿ ಪ್ರಿಯದರ್ಶಿಣಿ ಸಾಣೆಕೊಪ್ಪ ಮುಸ್ಲಿಂ ಮುಖಂಡರಿಗೆ ಸೂಚನೆ ನೀಡಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಧ್ವನಿವರ್ಧಕವನ್ನು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಬಳಕೆ ಮಾಡಬೇಕು. ಬಕ್ರೀದ್ ಹಬ್ಬವು ತ್ಯಾಗ ಬಲಿದಾನದ ಸಂಕೇತವಾಗಿದ್ದು, ಶಾಂತಿ ಸಹಭಾಳ್ವೆಯಿಂದ ಹಬ್ಬವನ್ನು ಆಚರಿಸಿ ಎಂದು ತಿಳಿಸಿದರು.

ಬಕ್ರೀದ್ ಹಬ್ಬದ ಆಚರಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬಾರದು. ಕೋಮುಗಲಭೆ ಸೇರಿದಂತೆ ಇನ್ನಿತರ ಯಾವುದೇ ಚಟುವಟಿಕೆ ನಡೆಯದಂತೆ ಸಮಾಜದ ಮುಖಂಡರೇ ಎಚ್ಚರಿಕೆ ವಹಿಸಬೇಕು. ಹಬ್ಬವನ್ನು ಸಂಭ್ರಮದಿಂದ ಶಾಂತಿಯುತವಾಗಿ ಆಚರಣೆ ಮಾಡುವ ಮೂಲಕ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮುದ್ದುರಾಜು, ಸಬ್ ಇನ್ಸ್ ಪೆಕ್ಟರ್ ಕಿರಣ್, ಮುಸ್ಲಿಂ ಸಮಾಜದ ಮುಖಂಡರಾದ ಏಜಸ್ ಅಹಮ್ಮದ್, ಇಮ್ರಾನ್ ಖಾನ್, ಅಜರುದ್ಧಿನ್, ಸಾಧಿಕ್ ಪಾಷಾ ಸೇರಿದಂತೆ ಮಸೀದಿಯ ಧರ್ಮ ಗುರುಗಳು ಹಾಗು ಪಟ್ಟಣದ ಮುಸ್ಲಿಂ ಮುಖಂಡರು ಹಾಜರಿದ್ದರು.

RELATED ARTICLES
- Advertisment -
Google search engine

Most Popular