ಮೈಸೂರು : ಬಂಡೀಪುರ, ನಾಗರಹೊಳೆ ಸಫಾರಿಯಲ್ಲಿ ಒಂದು ಟ್ರಿಪ್ ಕಡಿತಗೊಳಿಸುವಂತೆ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6ಗಂಟೆಯ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ.
ವಾಹನದ ಬೆಳಕು ಮತ್ತು ಶಬ್ದದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿ, ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದಿರುವ ಸಚಿವರು, ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ನಿಟ್ಟಿನಲ್ಲಿ ಅ.28ರಿಂದಲೇ ಹಾಲಿ ಇರುವ ಸಫಾರಿಯ ಟ್ರಿಪ್ ಗಳ ಪೈಕಿ 1ಟ್ರಿಪ್ ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.



