ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತ ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜ. 25ಕ್ಕೆ ಮುಂದೂಡಿದೆ.
ಅಧಿವೇಶನದ ವೇಳೆ ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಉದ್ದೇಶಿಸಿ ಸಿ.ಟಿ.ರವಿ ಬಳಕೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಸಿ.ಟಿ.ರವಿ ಅವರ ಧ್ವನಿ ಪರೀಕ್ಷೆ ನಡೆಸುವ ಅಗತ್ಯತೆಯಿದೆ ಎಂದು ಸಿಐಡಿ ಪೊಲೀಸರು ಅರ್ಜಿ ಸಲ್ಲಿಸಿದ್ದರು.
ಬುಧವಾರ ನಡೆದ ಅರ್ಜಿ ವಿಚಾರಣೆ ವೇಳೆ, ಧ್ವನಿ ಪರೀಕ್ಷೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿ.ಟಿ.ರವಿ ಪರ ವಕೀಲರು ಕಾಲಾವಕಾಶ ಕೇಳಿದ್ದರು. ಹೀಗಾಗಿ ಮುಂದಿನ ವಿಚಾರಣೆಯನ್ನು ಜ.25ಕ್ಕೆ ಮುಂದೂಡಲಾಗಿದೆ.