Friday, April 11, 2025
Google search engine

Homeಅಪರಾಧಕಾನೂನುಅಶ್ಲೀಲ ಪದ ಬಳಕೆ ಪ್ರಕರಣ: ಸಿಟಿ ರವಿಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

ಅಶ್ಲೀಲ ಪದ ಬಳಕೆ ಪ್ರಕರಣ: ಸಿಟಿ ರವಿಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಷಯಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್​​ನಲ್ಲಿ ಗುರುವಾರ ನಡೆಯಿತು. ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ವಾದ, ಪ್ರತಿವಾದ ಆಲಿಸಿದ ಕೋರ್ಟ್​, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿಕೆ ಮಾಡಿದೆ.

ಹೌದು ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಧಾನ ಪರಿಷತ್​​ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ವೇಳೆ, ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾ. ನಾಗಪ್ರಸನ್ನ ಪ್ರಶ್ನಿಸಿದರು. ಇದೇ ವೇಳೆ, ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು ದೃಢಪಡಿಸಿದರು.ಸದನದ ಸದಸ್ಯರಿಗೆ ನೀಡಿದ ರಕ್ಷಣೆ ಏನು? ಸಭಾಪತಿಗಳು ಪೀಠದಲ್ಲಿ ಇಲ್ಲದೆ ಇದ್ದ ಸಂದರ್ಭದಲ್ಲಿಯೂ ಅದು ಅನ್ವಯವಾಗುತ್ತದೆಯೇ? ಶಾಸಕಾಂಗವು ಈ ಪ್ರಕರಣದ ಬಗ್ಗೆ ಗಮನಹರಿಸಿ ತೀರ್ಪು ನೀಡಿದ ನಂತರ, ಸಿಐಡಿಯಂತಹ ಸಂಸ್ಥೆ ಇನ್ನೂ ತನಿಖೆ ನಡೆಸಬಹುದೇ ಎಂದು ಪ್ರಭುಲಿಂಗ ನಾವದಗಿ ಪ್ರಶ್ನಿಸಿದರು.

ವಿಚಾರಣಾ ನ್ಯಾಯಾಲಯದ ಮುಂದೆ ಬಾಕಿ ಉಳಿದಿರುವ ಪ್ರಕ್ರಿಯೆಗಳ ಮೇಲೆ ವಿಧಿಸಲಾದ ತಡೆಯಾಜ್ಞೆಯನ್ನು ತೆರವು ಮಾಡಲು ಎಸ್​​ಪಿಪಿ ನ್ಯಾಯಾಲಯವನ್ನು ಮನವಿ ಮಾಡಿದರು. ಹೈಕೋರ್ಟ್ ಆದೇಶದ ಕಾರಣ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಕೈಗಳನ್ನು ಕಟ್ಟಿಹಾಕಿದಂತಾಗಿದೆ. ಸಿಟಿ ರವಿ ಅವರ ವಾಯ್ಸ್ ಸ್ಯಾಂಪಲ್ ಪಡೆಯುವುದಕ್ಕೆ ಸಂಬಂಧಿಸಿದ ಅರ್ಜಿ ಬಾಕಿ ಇದೆ ಎಂದರು.ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 13ಕ್ಕೆ ನಿಗದಿಪಡಿಸಿದೆ.

RELATED ARTICLES
- Advertisment -
Google search engine

Most Popular