ಬೆಂಗಳೂರು: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (೫೨) ಆತ್ಮಹತ್ಯೆಯ ಬೆನ್ನಲ್ಲೇ ಬಿಜೆಪಿಗೆ ಬಹುದೊಡ್ಡ ಅಕ್ರಮದ ಅಸ್ತ್ರ ಸಿಕ್ಕಂತಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ಗುರುವಾರ ನಡೆದಿದೆ.
ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಬಿಜೆಪಿ ಎಸ್ ಟಿ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ .