Friday, April 4, 2025
Google search engine

Homeರಾಜ್ಯಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು.

ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ ಕೋಟೆ ಶಾಸಕರಾದ ಅನಿಲ್ ಕುಮಾರ್, ವಿಧಾನ ಪರಿಷತ್ ಶಾಸಕ ಡಾ ಯತೀಂದ್ರ ಎಸ್, ಸಿ.ಎನ್.ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಮತ್ತಿತರರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿದ ಅವರು, ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎಂ.ಜೆ.ರೂಪ ಮತ್ತು ಸ್ವಾಗತ ಸಮಿತಿಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular