Sunday, April 20, 2025
Google search engine

HomeUncategorizedರಾಷ್ಟ್ರೀಯಪರೀಕ್ಷೆ ಬರೆಯಲು ಅವಕಾಶ ನೀಡದ ಅಧಿಕಾರಿಗಳು: ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯಲು ಅವಕಾಶ ನೀಡದ ಅಧಿಕಾರಿಗಳು: ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್: ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದದ್ದಕ್ಕೆ ಅಧಿಕಾರಿಗಳು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮನನೊಂದು ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಟೇಕಂ ಶಿವಕುಮಾರ್ ಎಂದು ಗುರುತಿಸಲಾಗಿದೆ.

ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಬಳಿ ತೆಲುಗಿನಲ್ಲಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ “ನನ್ನನ್ನು ಕ್ಷಮಿಸಿ, ಅಪ್ಪಾ, ನಾನು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ನನ್ನನ್ನು ಕ್ಷಮಿಸಿಬಿಡಿ. ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾನೆ.

ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಬರಬೇಕೆಂದು ಶಿಕ್ಷಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ ನಿಗದಿತ ಸಮಯಕ್ಕಿಂತ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಇದರ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular