Friday, April 11, 2025
Google search engine

Homeರಾಜ್ಯಸುದ್ದಿಜಾಲಅಧಿಕಾರಿಗಳು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸಿ: ಕೆ. ಎನ್. ಫಣೀಂದ್ರ

ಅಧಿಕಾರಿಗಳು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸಿ: ಕೆ. ಎನ್. ಫಣೀಂದ್ರ

ಮೈಸೂರು: ಅಧಿಕಾರಿಗಳು ಪಾರದರ್ಶಕವಾಗಿ ಪ್ರಾಮಾಣಿಕವಾಗಿ, ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸಿ ಎಂದು ಕರ್ನಾಟಕ ಉಪ ಲೋಕಾಯುಕ್ತ ರಾದ  ಕೆ. ಎನ್. ಫಣೀಂದ್ರ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾವು ಈಗಾಗಲೇ 7 ಜಿಲ್ಲೆಗಳಲ್ಲಿ ಅಹವಾಲು ಸ್ವೀಕಾರ ಮಾಡಿದ್ದೇವೆ. ಇದು 8 ನೆ ಜಿಲ್ಲೆಯಾಗಿದ್ದು ಕಾರ್ಯಕ್ರಮದ ಉದ್ದೇಶ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದ ಮೇಲೆ ನಡೆಯುತ್ತಿದೆ. ಸರ್ಕಾರದ 3 ಅಂಗಗಳು ತಮ್ಮ ತಮ್ಮ ಕಾರ್ಯಗಳನ್ನು ನ್ಯಾಯುತವಾಗಿ ಮಾಡಬೇಕು.ಶಾಸಕಾಂಗ ಕಾನೂನುಗಳನ್ನು ರಚಿಸಿದರೆ, ಆ ಕಾನೂನುಗಳನ್ನು ಕಾರ್ಯಾಂಗ ಜಾರಿಗೆ ತಂದು ಜನರಿಗೆ ತಲುಪಿಸುತ್ತದೆ. ಜನರಿಗೆ ನೀಡಿರುವ ಕಾನೂನು, ಹಕ್ಕುಗಳ ಉಲ್ಲಂಘನೆಗೆ ಅಧಾಗ ನ್ಯಾಯಾಂಗ ಇದನ್ನು ಸರಿಪಡಿಸುವ ಕಾರ್ಯ ಮಾಡುತ್ತದೆ. ಮಾಧ್ಯಮವು ಈ ಮೂರು ಅಂಗಗಳು ಮಾಡುವ ತಪ್ಪುಗಳನ್ನು ಗಮನಕ್ಕೆ ತಂದು ಸರಿಪಡಿಸುವ ಕಾರ್ಯಕ್ಕೆ ಸಹಕರಿಸುತ್ತದೆ ಎಂದರು.

ಜನರ ಜೀವನವನ್ನು ಸುಧಾರಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತದೆ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ.

ಎಲ್ಲೆಲ್ಲಿ ಕಾರ್ಯಾಂಗ, ಶಾಸಕಾಂಗ ತಪ್ಪು ದಾರಿ ಹಿಡಿದು ಕಾನೂನು ಉಲ್ಲಂಘನೆ ಮಾಡಿದರೆ, ಕರ್ತವ್ಯ ಲೋಪ ಎಸಗಿದರೆ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತದೆ. ಲೋಕಾಯುಕ್ತ ಸಂಸ್ಥೆ ಕರ್ತವ್ಯ ಲೋಪ ಪರಿಶೀಲಿಸಿ ಕರ್ತವ್ಯ ಲೋಪ ಎಸಗಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುತ್ತದೆ.

ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ನಮ್ಮ ವ್ಯಾಪ್ತಿಗೆ ಬಂದರೆ ದೂರನ್ನು ಸಂಬಂದಿಸಿದ ಅಧಿಕಾರಿಗಳಿಗೆ ಕಳುಹಿಸಿ ಸಮಸ್ಯೆ ಪರಿಹರಿಸಲಾಗುವುದು. ನಮ್ಮ ವ್ಯಾಪ್ತಿ ಮೀರಿದ ದೂರು ಆದರೆ ಮಾಹಿತಿ ನೀಡಿ ನ್ಯಾಯಾಲಯದ ದೂರು ಸಲ್ಲಿಸಲು ಮಾರ್ಗದರ್ಶನ ನೀಡಲಾಗುವುದು. ಅಧಿಕಾರಿಗಳು ಆತ್ಮ ಸಾಕ್ಷಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತಲುಪಬೇಕಾದ ಸವಲತ್ತುಗಳನ್ನು ನ್ಯಾಯಯುತವಾಗಿ ಸಕಾಲದಲ್ಲಿ ತಲುಪಿಸಬೇಕು.

ಲೋಕಾಯುಕ್ತಕ್ಕೆ ದೂರನ್ನು ನೀಡಬೇಕು ಎಂದೇ ಇಲ್ಲಾ, ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು. ಅನಾವಶ್ಯಕವಾಗಿ ಸುಳ್ಳು ದೂರುಗಳನ್ನು ಸಲ್ಲಿಸಿದರೆ ಸುಳ್ಳು ದೂರು ಸಲ್ಲಿಸುವವರನ್ನು 6 ತಿಂಗಳು ಜೈಲಿಗೆ ಕಳುಹಿಸುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸಿ, ಸಂಬಂದಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಲೋಕಾಯುಕ್ತ ಉಪ ನಿಬಂಧಕರಾದ ಚನ್ನಕೇಶವ ರೆಡ್ಡಿ, ಅಪರ ನಿಬಂಧಕರಾದ ಶಿವಕುಮಾರ್ ಬಿ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್, ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್. ಪಿ. ಸುರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯಿತ್ರಿ, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಅವರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular