ಚಾಮರಾಜನಗರ: ಹನೂರು ತಾಲೂಕಿನ ಮಂಗಲ ಗ್ರಾಮ ಹಾಗೂ ಚಾಮರಾಜನಗರ ಪಟ್ಟಣದ ಕರಿನಂಜನಪುರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಅಧಿಕಾರಿಗಳು ಭೇಟಿ ನೀಡಿ, ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ಜನಗಣತಿ 2027 ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.
ಕ್ಷೇತ್ರ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಪದ್ಧತಿ, ಅಧಿಕಾರಿಗಳ ಕಾರ್ಯನಿರ್ವಹಣೆ ಹಾಗೂ ಬಾಕಿ ಇರುವ ಕೆಲಸಗಳ ಸ್ಥಿತಿಗತಿಗಳನ್ನು ಸಮಗ್ರವಾಗಿ ಅವಲೋಕಿಸಿ, ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರು, ಹನೂರು ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



