ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಗ್ಗೆ ೧೧:೩೦ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಈ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಅವರು ೨ನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆರ್ಟಿಕಲ್ ೩೭೦ ರದ್ಧತಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭೆ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ ಗೆದ್ದ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥ ಒಮರ್ ಅಬ್ದುಲ್ಲಾ ಮೊದಲ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇಂದು ಬುಧವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಜನರಲ್ ಮನೋಜ್ ಸಿನ್ಹಾ ಅವರು ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇನ್ನು ಈ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಆಪ್ ಮುಖಸ್ಥ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳಲಿದ್ದಾರೆ.