Saturday, April 19, 2025
Google search engine

Homeರಾಜ್ಯಸುದ್ದಿಜಾಲಜೂನ್ ೭ರಂದು ಧೀಮಂತ ನಾಯಕ ವಿ.ಶ್ರೀನಿವಾಸ್ ಪ್ರಸಾದ್ ರವರ ಒಂದು ನೆನಪು ಕಾರ್ಯಕ್ರಮ

ಜೂನ್ ೭ರಂದು ಧೀಮಂತ ನಾಯಕ ವಿ.ಶ್ರೀನಿವಾಸ್ ಪ್ರಸಾದ್ ರವರ ಒಂದು ನೆನಪು ಕಾರ್ಯಕ್ರಮ

ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ನಾಡು ಕಂಡ ಅಪರೂಪದ ಹಿರಿಯ ಮತ್ಸದಿ ರಾಜಕಾರಣಿ ಧೀಮಂತ ನಾಯಕ ವಿ.ಶ್ರೀನಿವಾಸ್ ಪ್ರಸಾದ್ ರವರ ಒಂದು ನೆನಪು ಎಂಬ ಕಾರ್ಯಕ್ರಮವನ್ನು ಜೂನ್ ೭ರಂದು ಬೆಳಿಗ್ಗೆ ೧೦:೩೦ಕ್ಕೆ ಪಟ್ಟಣದ ಸಾಯಿಕನ್ವೆನ್‌ಷೆನ್ ಹಾಲ್‌ನಲ್ಲಿ ಜರುಗಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಈ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದಪ್ಪ ಮನವಿ ಮಾಡಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪಟ್ಟಣದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್, ಶಾಸಕ ಡಿ.ರವಿಶಂಕರ್, ಮಾಜಿ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಅನೇಕ ಗಣ್ಯರು ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಹೆಚ್ಚಿನ ಶ್ರೀನಿವಾಸ್ ಪ್ರಸಾದ್ ಅವರ ಅಭಿಮಾನಿಗಳು, ರಾಜಕೀಯ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘಸoಸ್ಥೆಗಳ ಪದಾಧಿಕಾರಿಗಳು ಆಗಮಿಸಬೇಕೆಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಿದ್ದಪ್ಪ ತಾಲ್ಲೂಕಿನ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ರಾಜ್ಯ ಕಂಡ ಅಪರೂಪದ ರಾಜಕಾರಣಿ ತಮ್ಮ ಜೀವನದುದ್ದಕ್ಕೂ ಅತ್ಯಂತ ಪ್ರಾಮಾಣಿಕ ದಕ್ಷ ಆಡಳಿತವನ್ನು ನೀಡಿದಂತ ದೀನ-ದಲಿತರ ಪರವಾಗಿ ಧ್ವನಿಯೆತ್ತಿದಂತ ಸರಳ ಸಜ್ಜನಿಕೆಯ ರಾಷ್ಟ್ರ ರಾಜಕೀಯದಲ್ಲಿ ತನ್ನದೇ ಚಾಪು ಮೂಡಿಸಿದಂತ ವಿ.ಶ್ರೀನಿವಾಸ್ ಪ್ರಸಾದ್ ರವರ ಕಾರ್ಯಕ್ರಮಕ್ಕೆ ಜಾತಿ ಬೇದವಿಲ್ಲದೇ ಪಕ್ಷಬೇದವಿಲ್ಲದೇ ಜಾತ್ಯಾತೀತವಾಗಿ ಈ ಒಂದು ನೆನಪು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರಾಜಯ್ಯ, ಜೆಡಿಎಸ್ ಮುಖಂಡ ಹನಸೋಗೆ ನಾಗರಾಜ್, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ನಂಜುoಡ, ದಲಿತ ಮುಖಂಡರಾದ ರಾಚಯ್ಯ ಹಂಪಾಪುರ ಸುರೇಶ್, ರಾಜಶೇಖರ ಸೇರಿದಂತೆ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular