Thursday, April 17, 2025
Google search engine

Homeಸ್ಥಳೀಯಆ.14ರಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಸಾರ್ವಜನಿಕರ ದೂರು ಸ್ವೀಕಾರ

ಆ.14ರಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಸಾರ್ವಜನಿಕರ ದೂರು ಸ್ವೀಕಾರ

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವು ಆಗಸ್ಟ್ 14 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕಿನ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳ ಕಚೇರಿಯಲ್ಲಿ, ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಹಾಗೂ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ತಾಲ್ಲೂಕು ಕಚೇರಿಯಲ್ಲಿ ನಡೆಯಲಿದೆ.

ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ದೂರು ನೀಡಿ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಮೈಸೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕ್ಷರಾದ ಸುರೇಶ್ ಬಾಬು ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular