Saturday, April 19, 2025
Google search engine

Homeರಾಜ್ಯಸುದ್ದಿಜಾಲಫೆಬ್ರವರಿ 13ರಂದು ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮರಥೋತ್ಸವ

ಫೆಬ್ರವರಿ 13ರಂದು ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮರಥೋತ್ಸವ

ರಥೋತ್ಸವ ಅದ್ದೂರಿಯಾಗಿ ಆಚರಿಸಲು ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ತೀರ್ಮಾನ

ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್

ಬೆಟ್ಟದಪುರ : ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮರಥೋತ್ಸವವನ್ನು ಫೆಬ್ರವರಿ 13ರಂದು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲ ಗ್ರಾಮಸ್ಥರು ಸಹಕರಿಸಬೇಕೆಂದು ಹುಣಸೂರು ಉಪ ವಿಭಾಗಾಧಿಕಾರಿ ಎಚ್ ಬಿ ವಿಜಯಕುಮಾರ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ರಥೋತ್ಸವದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಬೇಕಾಗಿದ್ದು ಆ ಉದ್ದೇಶದಿಂದ ಗ್ರಾಮ ಪಂಚಾಯತಿಯವರು ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಿಸಬೇಕು ಎಂದರು.

ಸಂಪ್ರದಾಯದಂತೆ ಈ ಬಾರಿಯೂ ಅದ್ದೂರಿ ರಥೋತ್ಸವ ಆಚರಣೆ ಮಾಡಬೇಕು. ಇದಕ್ಕೆ ಸುತ್ತಮುತ್ತಲ ಗ್ರಾಮಸ್ಥರು ಒಟ್ಟಾಗಿ ಸೇರಿ ಸಹಕಾರ ನೀಡಬೇಕು. ರಸ್ತೆ, ಚರಂಡಿ, ದೇವಸ್ಥಾನದ ಆವರಣ ಸೇರಿದಂತೆ ಗ್ರಾಮದಾದ್ಯಂತ ಶುಚಿತ್ವ ಕಾಪಾಡಿ,ರಥೋತ್ಸವದಲ್ಲಿ ನೈರ್ಮಲ್ಯತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದು, ಸ್ವಚ್ಛತೆಯ ಬಗ್ಗೆ ಎಚ್ಚರ ವಹಿಸಿ ಎಂದರು.

ರಥೋತ್ಸವಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಸುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯವರು ಎಚ್ಚರ ವಹಿಸುವಂತೆ ಸೂಚಿಸಿದರು.

ತಹಸೀಲ್ದಾರ್ ನಿಸರ್ಗ ಪ್ರಿಯ ಮಾತನಾಡಿ ಜನವರಿ 30ರಂದು ರಥೋತ್ಸವಕ್ಕೆ ಸಂಬಂಧಪಟ್ಟಂತೆ ಹರಾಜು ಪ್ರಕ್ರಿಯೆ ನಡೆಯಲಿದ್ದು, ಫೆಬ್ರವರಿ 3 ರಿಂದ ಜಾನುವಾರ ಜಾತ್ರೆ ನಡೆಸಬೇಕು. ಜಾನುವಾರು ಜಾತ್ರೆಗೆ ಅವಶ್ಯಕವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು.ಹಾಗೂ ರಾಸುಗಳ ಆರೋಗ್ಯದ ಮೇಲೆ ನಿಗಾ ವಹಿಸಿ ಅವಶ್ಯಕತೆ ಇರುವ ಔಷಧಗಳನ್ನು ಶೇಖರಿಸಿ ಇಟ್ಟುಕೊಂಡು ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು ಎಂದು ಪಶುವೈದ್ಯಕೀಯ ಮತ್ತು ಪಶುಪಾಲನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬೆಟ್ಟದಪುರ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜಶೇಖರ್,ಸದಸ್ಯ ಶಿಲ್ಪಾ ಪ್ರಶಾಂತ್, ಉಪ ತಹಸಿಲ್ದಾರ್ ಶಶಿಧರ್, ಕಂದಾಯ ಅಧಿಕಾರಿ ಅಜ್ಮಲ್, ಪಶು ವೈದ್ಯಕೀಯ ಮತ್ತು ಪಶು ಪಾಲನೆ ಇಲಾಖೆಯ ಸಹಾಯಕ ನಿರ್ದೇಶಕ ಸೋಮಯ್ಯ, ಲೋಕೋಪಯೋಗಿ ಇಲಾಖೆಯ ಎ ಇ ಇ ವೆಂಕಟೇಶ್, ವೈದ್ಯಾಧಿಕಾರಿ ಪೂಜಾ, ಬೆಟ್ಟದಪುರ ಪೊಲೀಸ್ ಠಾಣೆಯ ಪಿಎಸ್ಐ ಶಿವಶಂಕರ್, ಚೆಸ್ಕಾಂನ ಎ ಇ ಪ್ರಶಾಂತ್, ಅರ್ಚಕರಾದ ಸತೀಶ್ ಕಶ್ಯಪ, ಕೃಷ್ಣ ಪ್ರಸಾದ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

RELATED ARTICLES
- Advertisment -
Google search engine

Most Popular