ರಾಮನಗರ: ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗವು ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ.
ಮಾದರಿ ನೀತಿ ಸಂಹಿತೆ ಇದೇ ಜ. ೧೬ ರಿಂದ ಜಾರಿಗೊಂಡಿದ್ದು, ೨೦೨೪ರ ಜ. ೨೩ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.
ಜ. ೩೦ಕ್ಕೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಜ. ೩೧ ನಾಮಪತ್ರಗಳ ಪರಿಶೀಲನೆ, ೨೦೨೪ರ ಫೆಬ್ರವರಿ ೨ರಂದು ನಾಮಪತ್ರಗಳ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಫೆ. ೧೬ರ ಬೆಳಿಗ್ಗೆ ೮ ರಿಂದ ಸಂಜೆ ೪ ರವರೆಗೆ ಚುನಾವಣಾ ಮತದಾನ ನಡೆಯಲಿದೆ. ಫೆ. ೨೦ರಂದು ಮತ ಎಣಿಕೆ ನಡೆಯಲಿದೆ. ಫೆ. ೨೩ಕ್ಕೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.