ಮಂಗಳೂರು (ದಕ್ಷಿಣ ಕನ್ನಡ): ಸಂವಿಧಾನದ ಬಗ್ಗೆ ಜಾಗೃತಿ ಅತ್ಯಗತ್ಯ. ಸಂವಿಧಾನದ ಪೀಠಿಕೆಗಳನ್ನು ಎಲ್ಲಾ ಕಚೇರಿಗಳಲ್ಲಿ ಆಳವಡಿಸಬೇಕು ಎಂದು ಮಂಗಳೂರಲ್ಲಿ ನಿನ್ನೆ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಫೆಬ್ರವರಿ 18 ರಂದು ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಅಂದರು.