ಮಂಡ್ಯ: ಎಂಪಿ ಮೈತ್ರಿ ಟಿಕೆಟ್ ಬಹುತೇಕ ಜೆಡಿಎಸ್ ಪಾಲು ಹಿನ್ನಲೆ ಚುನಾವಣೆಗೆ ರಣಕಹಳೆ ಮೊಳಗಿಸಲು ದಳಪತಿ ಫೀಲ್ಡ್ ಗೆ ಇಳಿದಿದ್ದಾರೆ.
ಮಾ.15 ರಂದು ಬೆಳಗ್ಗೆ 11 ಗಂಟೆಗೆ ಮಂಡ್ಯದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಜೆಡಿಎಸ್ ಸಭೆ ಹಮ್ಮಿಕೊಳ್ಳಲಾಗಿದೆ.
ಚುನಾವಣೆ ಸಂಬಂಧ ಇದೇ ಮೊದಲ ಬಾರಿಗೆ ಹೆಚ್. ಡಿ.ಕುಮಾರಸ್ವಾಮಿ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಮಾಜಿ ಶಾಸಕರು, ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ.
ಜೆಡಿಎಸ್ ಟಿಕೆಟ್ ಮಾಜಿ ಸಚಿವ ಸಿ ಎಸ್. ಪುಟ್ಟಾರಾಜುವಿಗೆ ಬಹುತೇಕ ಫಿಕ್ಸ್ ಎನ್ನಲಾಗಿದ್ದು, ದಳಪತಿಗಳ ಚುನಾವಣಾ ಪೂರ್ವಭಾವಿ ಸಭೆ ಮಹತ್ವ ಪಡೆದುಕೊಂಡಿದೆ.