ಬೆಂಗಳೂರು: ಬಿಜೆಪಿ ರಾಜ್ಯ ಘಟಕದ 11ನೇ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರು ನ. 15ರಂದು ಮಲ್ಲೇಶ್ವರದಲ್ಲಿರುವ ಪಕ್ಷದ ಪ್ರಧಾನ ಕಚೇರಿ “ಜಗನ್ನಾಥ ಭವನ’ದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬುಧವಾರ ಬೆಳಗ್ಗೆ 10 ಗಂಟೆಗೆ ಪಕ್ಷದ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಂದ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ವಿಜಯೇಂದ್ರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸಮಾವೇಶ ಮುಂದೂಡಿಕೆ?
ನ. 16ರಂದು ಅರಮನೆ ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದ ಬೃಹತ್ ಸಮಾವೇಶವನ್ನು ನವೆಂಬರ್ ಕೊನೆಯ ವಾರಕ್ಕೆ ಮುಂದೂಡಲಾಗಿದೆ. ನ. 30ರೊಳಗೆ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.