ಧಾರವಾಡ: ಧರ್ಮ ಎಂದರೆ ಸಮಾಜವನ್ನು ನಿರಂತರ ಮುನ್ನಡೆಸುವ ಬದುಕಿನ ಸೂತ್ರ. ಎಲ್ಲರೂ ಸುಖ ಸಂತೋಷದಿಂದ ಇರಬೇಕು. ಅದಕ್ಕಾಗಿ ಅಳವಡಿಸಿಕೊಳ್ಳವೇಕಾದ ನೀತಿ ನಿಯಮವೇ ಸನಾತನ ಧರ್ಮ’ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಖಾಸಗಿ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಂತೋಷದ ಪ್ರಯತ್ನ ಮತ್ತೊಬ್ಬರ ದುಃಖಕ್ಕೆ ಕಾರಣವಾಗಬಾರದು. ನನ್ನ ಪ್ರಯತ್ನದಿಂದ ಅಕ್ಕಪಕ್ಕದವರಿಗೆ ದುಃಖ ಆಗಬಾರದು. ನನ್ನ ಪ್ರಯತ್ನದಿಂದ ನನ್ನ ಜೊತೆಗೆ ಅಕ್ಕಪಕ್ಕದವರಿಗೂ ಸುಖ ಸಿಗುವಂತಾಗಬೇಕು ಎಂದರು.
ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಲಭೆ ವಿಚಾರಕ್ಕೆ ಮಾತನಾಡಿದ ಅವರು, ಮಳೆ ಬಂದಾಗ ಇಡೀ ಊರಿಗೆ ಬರುತ್ತದೆ. ಹೀಗಾಗಿ ಮತ್ತೊಬ್ಬರಿಗೆ ದುಃಖ ಆಗದಂತೆ ಎಲ್ಲರಿಗೂ ಸುಖ ಸಿಗುವಂತೆ ನಮ್ಮ ಪ್ರಯತ್ನಗಳು ಇರಬೇಕು. ಆಗ ಮಾತ್ರ ಎಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ. ಇದುವೆ ಸನಾತನ ಧರ್ಮವಾಗಿದೆ. ಇದನ್ನು ವಿರೋಧಿಸುವ ಮಟ್ಟಕ್ಕೆ ಕೈ ಹಾಕಬಾರದು. ಒಮ್ಮೆ ಕಿಡಿ ಹೊತ್ತಿದರೆ ಶಾಂತಿ ಬೇಗ ಸಿಗುವುದಿಲ್ಲ. ಮಣಿಪುರವೇ ಇದಕ್ಕೆ ಉದಾಹರಣೆಯಾಗಿದೆ. ರಾಜಕಾರಣಿಗಳು ಒಂದು ಪಕ್ಷಕ್ಕೆ ಸಿಮೀತವಲ್ಲ ಸಮಾಜದ ಎಲ್ಲರ ಸುಖ ಶಾಂತಿಗೆ ಬೇಕಾದ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.