Wednesday, March 11, 2026
Google search engine

Homeಸ್ಥಳೀಯದೈಹಿಕ ಶಿಕ್ಷಣ ನಿರ್ದೇಶಕರಿಗೆ ಒಂದು ದಿನದ ಸಾಮರ್ಥ್ಯ ವೃದ್ಧಿ ತರಬೇತಿ

ದೈಹಿಕ ಶಿಕ್ಷಣ ನಿರ್ದೇಶಕರಿಗೆ ಒಂದು ದಿನದ ಸಾಮರ್ಥ್ಯ ವೃದ್ಧಿ ತರಬೇತಿ

ಮೈಸೂರು: ಮೈಸೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ವಲಯದ ಜಂಟಿ ನಿರ್ದೇಶಕರ ಕಚೇರಿ ಮತ್ತು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಿಗೆ ಒಂದು ದಿನದ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ಡಾ ಶ್ರೀಕಾಂತ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ತರಬೇತಿಯನ್ನು ನೀಡಿದರು. ಮತ್ತೊಬ್ಬ ಸಂಪನ್ಮೂಲ ವ್ಯಕ್ತಿಯಾಗಿಕಾಲೇಜು ಶಿಕ್ಷಣ ಇಲಾಖೆ ಮೈಸೂರು ಜಂಟಿ ನಿರ್ದೇಶಕರ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀ ಅರವಿಂದ್ ತರಬೇತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅನಿತಾ ಎಂ ಎಸ್ ಅವರು ವಿದ್ಯಾರ್ಥಿಗಳ ಬದುಕನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಗಟ್ಟಿಯಾಗಿ ಕಟ್ಟಿಕೊಡುವ ಹೊಣೆ ದೈಹಿಕ ಶಿಕ್ಷಣ ನಿರ್ದೇಶಕರ ಮೇಲಿದೆ ಎಂದರು.

ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕ ನುಡಿಗಳ ನಾಡಿದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷರಾದ ಡಾ. ಉದಯ್ ಕುಮಾರ್ ಎಚ್ ವಿ ಅವರು ” ಪದವಿ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ವಿದ್ಯಾರ್ಥಿಗಳು ಸಾಕಷ್ಟು ಸವಾಲುಗಳು ಮತ್ತು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕಾರ್ಯಗಾರದಲ್ಲಿ ಅವುಗಳ ಕುರಿತು ಸಮಾಲೋಚನೆ, ಚರ್ಚೆ ಮತ್ತು ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವ ಭರವಸೆ ನಮಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜು ಶಿಕ್ಷಣ ಇಲಾಖೆ ಮೈಸೂರು ಪ್ರಾದೇಶಿಕ ವಲಯದ ಜಂಟಿ ನಿರ್ದೇಶಕರಾದ ಡಾ. ಪ್ರತಿಮಾ ಬಿ ಎಸ್ ಅವರು ” ದೈಹಿಕ ಶಿಕ್ಷಣ ನಿರ್ದೇಶಕರಿಗೆ ವಿಶೇಷ ಕಾರ್ಯಗಾರವನ್ನು ಆಯೋಜಿಸಿರುವುದು ಅಭಿನಂದನಾರ್ಹ. ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಆಸಕ್ತಿ ಮತ್ತು ಸೋಲು ಗೆಲುವನ್ನು ಸಮಾನ ಸ್ಥಿತಿಯಲ್ಲಿ ಸ್ವೀಕರಿಸುವ ಮನೋಭಾವವನ್ನು ಹುಟ್ಟುಹಾಕುವ ಜವಾಬ್ದಾರಿ ದೈಹಿಕ ಶಿಕ್ಷಣ ನಿರ್ದೇಶಕರ ಮೇಲಿದೆ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಕಾರ್ಯದರ್ಶಿಯಾದ ಡಾ. ಭಾಸ್ಕರ್ ಕೆ ಎಸ್ ಅವರು ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಗಾರದ ಸಂಯೋಜಕರು ಮತ್ತು ಗ್ರಂಥ ಪಾಲಕರಾದ ಡಾ. ಮುತ್ತುರಾಜ್ ಅವರು ವಂದನಾರ್ಪಣೆ ನೆರವೇರಿಸಿದರು. ಕನ್ನಡ ಸಹ ಪ್ರಾಧ್ಯಾಪಕಿ ಡಾ. ಸುಂದರಿ ಕಾರ್ಯಕ್ರಮವನ್ನು ನಿರೂಪಿಸಿದರು. ಅರ್ಥಶಾಸ್ತ್ರ ಸಹಪ್ರಾಧ್ಯಾಪಕಿ ಡಾ. ದಿವ್ಯ ಬಿ ಎಸ್ ಪ್ರಾರ್ಥನೆ ಸಲ್ಲಿಸಿದರು.

ಮೈಸೂರು ಚಾಮರಾಜನಗರ ಮತ್ತು ಹಾಸನ ಜಿಲ್ಲೆಯ ಸುಮಾರು 100 ದೈಹಿಕ ಶಿಕ್ಷಣ ನಿರ್ದೇಶಕರು ಕಾರ್ಯಾಗಾರದಲ್ಲಿ ಭಾಗವಹಿಸಿದರು.

RELATED ARTICLES
- Advertisment -
Google search engine

Most Popular