Friday, April 18, 2025
Google search engine

Homeರಾಜ್ಯಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ ಗಳಷ್ಟೇ ರದ್ದು : ಸಿಎಂ ಸಿದ್ದರಾಮಯ್ಯ...

ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ ಗಳಷ್ಟೇ ರದ್ದು : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಸದ್ಯ ಅರ್ಹರಲ್ಲದವರ ಬಿಪಿಎಲ್ ಕಾಡುಗಳನ್ನು ಪರಿಷ್ಕರಣೆ ಮಾಡಿ ಎಪಿಎಲ್ ಕಾರ್ಡುಗಳಿಗೆ ಬದಲಾಯಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮಧ್ಯ ಸರ್ಕಾರದ ನೌಕರರು, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ಗಳನ್ನು ಅಷ್ಟೇ ರದ್ದು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರರಿಗೆ ಬಿಪಿಎಲ್‌ ಕಾರ್ಡ್ ನೀಡಿದ್ದರೆ ಅದನ್ನು ರದ್ದುಪಡಿಸಿ ಎಪಿಎಲ್‌ಗೆ ಪರಿವರ್ತಿಸಬೇಕು. ಇವರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸು ನೀಡುವಂತೆ ಸಿಎಂ ಆದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೇ ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ

RELATED ARTICLES
- Advertisment -
Google search engine

Most Popular