Friday, April 4, 2025
Google search engine

Homeರಾಜ್ಯಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಆರಂಭ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಆರಂಭ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕದ ದೂತಾವಾಸ ಕಚೇರಿ ನಿರ್ಮಿಸಬೇಕೆಂಬ ಬಹುಕಾಲದ ಬೇಡಿಕೆಯ ಕನಸು ಜನವರಿ 17ರಂದು ನನಸಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಘೋಷಣೆ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ‘ಎಕ್ಸ್’ ನಲ್ಲಿ ಪೋಸ್ಟ್‌ ಮಾಡಿ, ನನ್ನ ಪ್ರೀತಿಯ ಬೆಂಗಳೂರಿಗರೇ ಇದೀಗ ಅಧಿಕೃತ. ಜನವರಿ 17ರಂದು ಅಮೆರಿಕ ಕಾನ್ಸುಲೇಟ್ ತೆರೆಯಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ತೇಜಸ್ವಿ ಸೂರ್ಯ ಶ್ಲಾಘಿಸಿದ್ದಾರೆ.

ಈ ಸಂಬಂಧ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿಯಾಗಿ ಮೈಸೂರು ಪಾಕ್ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಜೈಶಂಕರ್ ಜೊತೆಗಿನ ವಿಡಿಯೊವನ್ನೂ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಸ್ಥಾಪಿಸುವುದು ಬಹುಕಾಲದ ಬೇಡಿಕೆಯಾಗಿತ್ತು. ಇಲ್ಲಿಯವರೆಗೆ, ಜನರು ಅಮೆರಿಕ ವೀಸಾಕ್ಕಾಗಿ ಚೆನ್ನೈ ಅಥವಾ ಹೈದರಾಬಾದ್‌ಗೆ ತೆರಳುತ್ತಿದ್ದರು.

RELATED ARTICLES
- Advertisment -
Google search engine

Most Popular