Saturday, April 19, 2025
Google search engine

Homeರಾಜ್ಯವಿರೋಧ ಪಕ್ಷದವರಿಗೆ ಸರ್ಕಾರದ ವಿರುದ್ಧ ಟೀಕೆ ಮಾಡುವುದು ಬಿಟ್ಟು ಬೇರೆ ಕೆಲಸವಿಲ್ಲ: ಶಾಸಕ ಕೆ.ಎಂ.ಉದಯ್

ವಿರೋಧ ಪಕ್ಷದವರಿಗೆ ಸರ್ಕಾರದ ವಿರುದ್ಧ ಟೀಕೆ ಮಾಡುವುದು ಬಿಟ್ಟು ಬೇರೆ ಕೆಲಸವಿಲ್ಲ: ಶಾಸಕ ಕೆ.ಎಂ.ಉದಯ್

ಮದ್ದೂರು: ವಿರೋಧ ಪಕ್ಷದವರಿಗೆ ಸರ್ಕಾರದ ವಿರುದ್ಧ ಟೀಕೆ, ಟಿಪ್ಪಣಿ ಹಾಗೂ ಪ್ರತಿಭಟನೆ ಮಾಡುವುದನ್ನು ಬಿಟ್ಟು ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ ಎಂದು ಶಾಸಕ ಕೆ.ಎಂ.ಉದಯ್ ವ್ಯಂಗ್ಯವಾಡಿದರು.

ಪಟ್ಟಣದ ಟಿಎಪಿಎಂಎಸ್ ಕಚೇರಿಯ ಬಳಿ ರೈತರಿಗೆ ಬಿತ್ತನೆ ಬೀಜ ವಿತರಣಾ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದ ಅಮೂಲ್ಯ ಸಮಯವನ್ನು ಹಾಳು ಮಾಡುವುದೆ ವಿರೋಪ ಪಕ್ಷದ ಅಜೆಂಡವಾಗಿದೆ. ಅವರಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ವಿರೋಧ ಪಕ್ಷದ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದರು.

ಮುಡಾ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ 3 ತನಿಖಾ ತಂಡಗಳು ತನಿಖೆ ನಡೆಸುತ್ತಿವೆ. ಅಂತಿಮವಾಗಿ ತಪ್ಪಿದ್ದರೆ ಮಾತ್ರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗುತ್ತದೆ. ಇದನ್ನೇ ನೆಪ ಮಾಡಕೊಂಡು ವಿರೋಧ ಪಕ್ಷದವರು ಸದನದ ಸಮಯ ಹಾಳು ಮಾಡುವುದು ಸರಿಯಲ್ಲ ಎಂದರು.

ಮುಡಾದಲ್ಲಿ ನಡೆದಿರುವ ಹಗರಣವನ್ನು ಖಂಡಿಸಿ ವಿರೋಧ ಪಕ್ಷದವರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಪ್ರತಕರ್ತರು ಕೇಳಿದ ಪ್ರಶ್ನೆಗೆ ವಿರೋಧ ಪಕ್ಷದವರಿಗೆ ಬೇರೆ ಕೆಲಸವಿಲ್ಲ ಅವರು ನಿರುದ್ಯೋಗಿಗಳು ಆದ್ದರಿಂದ ಈ ರೀತಿ ಮಾಡುತ್ತಾರೆ ಇದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.

RELATED ARTICLES
- Advertisment -
Google search engine

Most Popular