Friday, April 11, 2025
Google search engine

Homeರಾಜ್ಯತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ

ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ‌ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸೋಮವಾರ ಆದೇಶಿಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ CWMA ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.
15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, ಸಿಡಬ್ಲ್ಯೂಆರ್‌ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದ್ದು, ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ಸಂಕಷ್ಟ ಎದುರಾಗಿದೆ.

ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ ನಡೆದಿದ್ದು, ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ಹಾಜರಿದ್ದರು. 24ನೇ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಸೇನಾ, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಮಣಿಯನ್, ಕೇರಳದ ಅಧಿಕಾರಿಗಳೂ ಖುದ್ದು ಹಾಜರಿದ್ದರು. ಕರ್ನಾಟಕ ಮತ್ತು ಪುದುಚೇರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.

ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು. ಈ ಹಿಂದೆ ಸೆಪ್ಟಂಬರ್ 12ರ ಆದೇಶದಂತೆ 15 ದಿನ ನೀರು ಬಿಡಲು ಸೂಚನೆ ನೀಡಲಾಗಿದೆ. ಪ್ರಾಧಿಕಾರ ದೆಹಲಿಯ CWMA ಕಚೇರಿಯಿಂದ ಆದೇಶ ಹೊರಡಿಸಿದೆ. ಕಾವೇರಿ ಪ್ರಾಧಿಕಾರದ ಕಚೇರಿಯಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯದ ಅಧಿಕಾರಿಗಳು ಖುದ್ದು ಭಾಗಿಯಾಗಿದ್ದರೆ ಕರ್ನಾಟಕ ಮತ್ತು ಪುದುಚೇರಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular