ಮಂಡ್ಯ: ತಮಿಳುನಾಡಿಗೆ ನೀರು ಬಿಡಲು ನಿಯಂತ್ರಣ ಸಮಿತಿ ಸೂಚನೆ ಹಿನ್ನಲೆ ಮಂಡ್ಯದ ಸಂಜಯ್ ವೃತ್ತದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ಭಿಕ್ಷಾ ಪಾತ್ರೆ ಹಿಡಿದು ಪ್ರತಿಭಟನೆ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ.
ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೇ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನು ಬೀದಿಗೆ ನಿಲ್ಲಿಸಿದೆ ಎಂದು ಕಿಡಿ ಕಾರಿರುವ ಪ್ರತಿಭಟನಾಕಾರರು, ‘ಕಾವೇರಿ ನಮ್ಮದು ಕಾವೇರಿ ನಮ್ಮದು’. ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಧಿಕ್ಕಾರ’ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಿಕ್ಷೆ ಪಾತ್ರೆ ಹಿಡಿದು ರಸ್ತೆ ಮೇಲೆ ಹೊರಳಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.