Sunday, April 20, 2025
Google search engine

Homeರಾಜ್ಯತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ- ವಿವಿಧೆಡೆ ಪ್ರತಿಭಟನೆ

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ- ವಿವಿಧೆಡೆ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರಿಂ ಕೋರ್ಟ್ ಆದೇಶ ಹಿನ್ನೆಲೆ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಕಬ್ಬು ಬೆಳೆಗಾರರ ಒಕ್ಕೂಟದಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ.

ಮಂಡ್ಯದ ಸಂಜಯ ಸರ್ಕಲ್ ನಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಪ್ರತಿಭಟನೆ ಹಿನ್ನೆಲೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮಂಡ್ಯದ ಸಂಜಯ ವೃತ್ತದಲ್ಲಿ ಹೆದ್ದಾರಿ ತಡೆದು ಮಂಡ್ಯ ತಾಲೂಕು ರೈತ ಸಂಘ ಪ್ರತಿಭಟನೆ ನಡೆಸಿದ್ದು, ಹೆದ್ದಾರಿಯಲ್ಲಿ ಮಲಗಿ ಸುಪ್ರೀಂ ಕೋರ್ಟ್, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪಾಂಡವಪುರದಲ್ಲೂ ಅನ್ನದಾತರ ಪ್ರತಿಭಟನೆ

ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪ್ರತಿಭಟನೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರಿಂದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಫೈವ್ ಲೈಟ್ ಸರ್ಕಲ್ ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಅವೈಜ್ಞಾನಿಕ ತೀರ್ಪು ನೀಡಿದೆ. ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ಆಗ್ರಹಿಸಿದರು.

ಕೆಆರ್ ಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ

ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಮಂಡ್ಯದಲ್ಲಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರಿಂದ ಮಂಡ್ಯದ ಸಂಜಯ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆ ಹಾಗೂ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಬೈಕ್ ಜಾಥಾ ಮೂಲಕ ಸುಪ್ರೀಂ ಕೋರ್ಟ್, ಪ್ರಾಧಿಕಾರ, ಸಮಿತಿ, ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ನದಿಗಳಿದು ರೈತರ ಪ್ರತಿಭಟನೆ

ತಮಿಳುನಾಡಿಗೆ ನೀರು  ಬಿಡಲು ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ನದಿಗಳಿದು ರೈತರ ಪ್ರತಿಭಟಿಸಿದ್ದಾರೆ.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮರಳಗಾಲದ ಕೃಷ್ಣೇಗೌಡ ನೇತೃತ್ವದಲ್ಲಿ ಕಾವೇರಿ ನದಿಯ ಮಧ್ಯ ಭಾಗಕ್ಕೆ ತೆರಳಿ ನದಿಗಳಿದು ಪ್ರತಿಭಟನೆ ನಡೆಸಲಾಗಿದೆ.

ರೈತ ಸಂಘದ ಭಾವುಟ ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದಂತೆ ರೈತರು ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular