ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು(ಕೆಪಿಎಸ್‍ಸಿ) ಫೆ.16ರಿಂದ ನಡೆಸುವ ಮುಂದಿನ ಎಲ್ಲಾ ಪರೀಕ್ಷೆಗಳಲ್ಲಿ ಬರೆಯಲು ಕಪ್ಪು ಬಾಲ್ ಪೆನ್ ಬದಲು ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್‍ಗಳನ್ನು ಮಾತ್ರ ಬಳಸಬೇಕು ಎಂದು ಆಯೋಗದ ಸಹಾಯಕ ಕಾರ್ಯದರ್ಶಿ ಟಿ. ಪ್ರಕಾಶ್ ಆದೇಶಿಸಿದ್ದಾರೆ.
ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, ಆಯೋಗವು ಪ್ರಸ್ತುತ ನಡೆಸುತ್ತಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಗೆ ಕಪ್ಪು ಬಾಲ್ ಪಾಯಿಂಟ್ ಪೆನ್‍ನಿಂದ ಪರೀಕ್ಷೆಗಳನ್ನು ಬರೆಯಲು ಸೂಚನೆಗಳನ್ನು ನೀಡಲಾಗಿರುತ್ತದೆ. ಈ ಸೂಚನೆಯನ್ನು ಮಾರ್ಪಡಿಸಲಾಗಿದ್ದು, ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್‍ಗಳನ್ನು ಮಾತ್ರ ಬಳಸಬೇಕು ಎಂದಿದ್ದಾರೆ.