Saturday, April 19, 2025
Google search engine

Homeರಾಜ್ಯಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚಿಸಿದ್ದು ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗಟ್ಟಲು ಶೀಘ್ರದಲ್ಲಿ ಹೊಸ ಕಾನೂನು ತರಲು ಸರ್ಕಾರದಿಂದ ಸಿದ್ಧತೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಮುಂದಿನ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇನ್ನು ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಪಾರ್ವತಿ ಅವರಿಗೆ ಇಡೀ ನೋಟಿಸ್ ನೀಡಿದ ವಿಚಾರವಾಗಿ, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ತಡೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗ ಯಾಕೆ ಇಷ್ಟು ಆತುರ ಎಂದಿದೆ. ಜಾರಿ ನಿರ್ದೇಶನಲಯದ ಸಂಬಂಧಿಸಿದೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೀವು ಆತರ ಮಾಡುವುದರಲ್ಲಿ ಅರ್ಥವಿಲ್ಲವೆಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸಿಬಿಐ ತನಿಖೆಗೆ ನೀಡಬೇಕೆ ಅಥವಾ ಬೇಡವೇ ಎಂದು ಚರ್ಚೆಯಾಗುತ್ತಿದೆ. ಹೈಕೋರ್ಟ್ ವಾದ ಪ್ರತಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ. ನನಗೆ ಈ ಒಂದು ಪ್ರಕರಣದಲ್ಲಿ ಯಾವುದೇ ಆತಂಕವಿಲ್ಲ ನ್ಯಾಯ ಸಿಗುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

RELATED ARTICLES
- Advertisment -
Google search engine

Most Popular