ಬೆಂಗಳೂರು: ವಿದ್ಯುತ್ ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿರಲಿಲ್ಲ ಎಂದು ಕೆ.ಜೆ. ಜಾರ್ಜ್ ಹೇಳಿಕೆಗೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ವಿದ್ಯುತ್ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ. ಈಗ ಜಾರಿಯಾಗಿದೆ ಎಂದು ಸಮಜಾಯಿಷಿ ನೀಡಿದ್ದರು.
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ವಿದ್ಯುತ್ ದರ ಹೆಚ್ಚಳವಾಗಿದೆ ಎನ್ನುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
ಗ್ಯಾರಂಟಿ ಯೋಜನೆ ವಿಚಾರದಲ್ಲಿ ಕಾದುನೋಡುವ ತಂತ್ರ ನಮ್ಮದು. ಉಚಿತ ಪ್ರಯಾಣ ವಿಚಾರದಲ್ಲಿ ಸರ್ಕಾರ ಆರಂಭ ಶೂರತ್ವ ತೋರುತ್ತಿದೆ. ಗ್ಯಾರಂಟಿ ಜಾರಿಗೆ ಹಣಕಾಸಿನ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಹೇಳುತ್ತಿಲ್ಲ. ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಕಳೆಯುತ್ತಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ ಬಿತ್ತನೆ ತಡವಾಗಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಮಾತುಗಳು ಕೇಳಿ ಬರುತ್ತಿವೆ. ಹೀಗಿದ್ದರೂ ಸಿಎಂ ಇವುಗಳನ್ನು ನಿಭಾಯಿಸಲು ಸನ್ನದ್ದವಾಗಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದ ಡ್ಯಾಂಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಅಂತ ಹೇಳಲ್ಲ. ಹೀಗಾಗಿ ಸರ್ಕಾರದ ಸಮರ್ಪಕವಾಗಿ ಪ್ಲಾನ್ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಆ ಟಾಸ್ಕ್ ಫೋರ್ಸ್ನಲ್ಲಿರ ಬೇಕು ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ ನೂರು ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಎನ್ ಡಿಆರ್ ಎಫ್ ತಂಡಗಳನ್ನು ಚುರುಕುಗೊಳಿಸಬೇಕು. ಸ್ಥಳೀಯ ಮಟ್ಟದಲ್ಲಿ ಬಿಗಿ ಮಾಡಬೇಕು. ಇದು ಜವಾಬ್ದಾರಿ ಇಲ್ಲದ ಸರ್ಕಾರ, ಸಹಾಯಕವಲ್ಲದ ಸರ್ಕಾರ ಎಂದು ಆಕ್ರೋಶ ಹೊರ ಹಾಕಿದ್ದಾರೆ.