ಮದ್ದೂರು: ಗ್ಯಾರೆಂಟಿ ಯೋಜನೆಗಳ ಅನುಷ್ಠಾನಗಳೊಂದಿಗೆ ಅಭಿವೃದ್ಧಿಗೂ ನಮ್ಮ ಸರ್ಕಾರ ಹಣ ನೀಡುತ್ತಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮದ್ದೂರು ಪಟ್ಟಣದ ಹೊಳೆ ಆಂಜನೇಯ ಸ್ವಾಮಿಯ ದೇಗುಲದ ಬಳಿ ಎಂಟು ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ಪಟ್ಟಣದ ಕೊಳಚೆ ನೀರು ಶುದ್ಧೀಕರಣ ಘಟಕದ ಬಳಿ ಶಿಂಶ ನದಿಗೆ ತಡೆಗೋಡ ನಿರ್ಮಾಣ ಕಾಮಗಾರಿ ಗಳಿಗೆ ಭೂಮಿ ಪೂಜೆ ಮಾಡಿ ನಂತರ ಅವರು ಮಾತನಾಡಿದರು.
ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಜೊತೆಗೆ ಸರ್ಕಾರದ ವಿವಿಧ ಇಲಾಖೆಗಳ ಯಾವುದೇ ಸೌಲಭ್ಯಗಳನ್ನು ನಿಲ್ಲಿಸಿಲ್ಲ ರಾಜ್ಯದ ಪ್ರತಿಯೊಬ್ಬ ಫಲಾನುಭವಿಗೂ ಆಯಾಯ ಇಲಾಖೆಯ ಸೌಲಭ್ಯಗಳು ಸಕಾಲಕ್ಕೆ ದೊರೆಯುತ್ತಿವೆ ಎಂದರು.
ಶಾಸಕ ಕೆಎಂ ಉದಯ್ ಅವರು ಶಾಸಕರಾಗಿ ಆಯ್ಕೆಯಾದಾಗ ಅವರು ಹೊಸ ಶಾಸಕರು ಅವರಿಗೇನು ಗೊತ್ತು ಎನ್ನುತ್ತಿದ್ದರು ಕೆಲಸ ಮಾಡುವ ಇಚ್ಛಾ ಶಕ್ತಿ ಇದ್ದರೆ ಯಾವುದೇ ಅಭಿವೃದ್ಧಿ ಮಾಡಬಹುದು ಅದರಂತೆ ಶಾಸಕ ಕೆಎಂ ಉದಯವರು ಅಭಿವೃದ್ಧಿ ಕೆಲಸಗಳನ್ನು ಹುಡುಕಿ ಹುಡುಕಿ ಮಾಡುತ್ತಿರುವುದೇ ಸಾಕ್ಷಿ ಎಂದರು.
ಎಂದೆ ಹತ್ತತ್ತು ವರ್ಷ ಶಾಸಕರಾಗಿದ್ದವರು ನಮಗೆ ಗೊತ್ತಾಗಲಿಲ್ಲ ಮೊದಲ ಬಾರಿಗೆ ಶಾಸಕರಾಗಿದ್ದೇವೆ ಎಂದು ಅಭಿವೃದ್ಧಿ ಮಾಡುವುದರಿಂದ ಜಾರಿಕೊಳ್ಳುತ್ತಿದ್ದರು. ಆದರೆ ಉದಯ್ ಅವರು ಅವರಿಗಿಂತ ಭಿನ್ನವಾಗಿದ್ದಾರೆ ಎಂದರೆ.
ನಮ್ಮ ಜನಪರ ಬಜೆಟ್ಟನ್ನು ವಿರೋಧ ಪಕ್ಷದವರಿಗೆ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದವರು ಟೀಕೆ ಮಾಡುವುದು ರೂಢಿ ಅದೇ ರೀತಿ ನಮ್ಮ ಬಜೆಟ್ ಅನ್ನು ವಿರೋಧಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದರೆ.
ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರಿದ್ದು ಯಾರನ್ನು ಸಂಸದರನ್ನಾಗಿ ಆಯ್ಕೆ ಮಾಡಬೇಕು ಎಂದು ತಿಳಿದಿದೆ ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮಿತ್ರ ಪಕ್ಷಕ್ಕೆ ಶಿಕ್ಷಕರ ಕ್ಷೇತ್ರದಲ್ಲಿ ಸೋಲಾಗಿದ್ದು ಅವರ ಅಪವಿತ್ರವಾದ ಮೈತ್ರಿಯನ್ನು ಜನರು ಒಪ್ಪುವುದಿಲ್ಲ ಎಂದು ಈಗಾಗಲೇ ಸಾಬೀತಾಗಿದೆ ಎಂದರು.
ರಾಜ್ಯದಲ್ಲಿ ಬೇರೆಯವರ ಹಂಗೆ ನಾವು 28ಕ್ಕೆ 28 ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ ಕನಿಷ್ಠ 20 ಕ್ಷೇತ್ರವನ್ನು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮಗೆ ಲೋಕಸಭಾ ಚುನಾವಣೆಯಲ್ಲಿ ಯಾರು ವಿರೋಧಿಗಳು ಎಂಬುವುದು ನಮಗೆ ಬೇಕಿಲ್ಲ ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದರು.