Saturday, April 19, 2025
Google search engine

Homeರಾಜ್ಯಸುದ್ದಿಜಾಲಬಡವರು ನೊಂದ ವರ್ಗದವರ ಪರ ನಮ್ಮ ಸರ್ಕಾರ: ಶಾಸಕ ಎ.ಆರ್. ಕೃಷ್ಣಮೂರ್ತಿ

ಬಡವರು ನೊಂದ ವರ್ಗದವರ ಪರ ನಮ್ಮ ಸರ್ಕಾರ: ಶಾಸಕ ಎ.ಆರ್. ಕೃಷ್ಣಮೂರ್ತಿ


ಯಳಂದೂರು: ಬಡವರು ಹಾಗೂ ನೊಂದ ವರ್ಗಗಳ ಪರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವಿದ್ದು ಇವರಿಗೆ ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಶಕ್ತಿಯನ್ನು ತುಂಬುವ ಕೆಲಸವನ್ನು ಸದಾ ಮಾಡುತ್ತಿರುತ್ತದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.

ಅವರು ಪಟ್ಟಣದ ಬಳೇಪೇಟೆಯಲ್ಲಿರುವ ಸವಿತಾ ಸಮಾಜದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಸರ್ಕಾರ ಅಹಿಂದ ಪರವಾಗಿದೆ. ಸವಿತಾ ಸಮಾಜ ತುಡಿತಕ್ಕೆ ಒಳಗಾದ ಸಮಾಜವಾಗಿದ್ದು ಇವರಿಗೆ ಚೈತನ್ಯ ತುಂಬುವ ಕೆಲಸವನ್ನು ಮಾಡಿದೆ. ಈ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿದ್ದು ಇದಕ್ಕೆ ಸಾಕ್ಷಿಯಾಗಿ ನಿಲ್ಲುತ್ತದೆ. ಇದೆ ಸಮುದಾಯದಯ ಪಿ.ಸಿ. ಶ್ರೀಕಂಠಸ್ವಾಮಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾಗಿದ್ದು ಅವರನ್ನು ಪಟ್ಟಣ ಪಂಚಾಯಿತಿಗೆ ಹೊಸದಾಗಿ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಿ ಈ ಸಮಾಜವನ್ನು ಗುರುತಿಸುವ ಕೆಲಸವನ್ನು ಮಾಡಲಾಗಿದೆ. ಇದಕ್ಕೆಲ್ಲಾ ಕಾರಣವಾಗಿರುವುದು ನಮ್ಮ ಸಂವಿಧಾನವಾಗಿದ್ದು ಡಾ.ಬಿ.ಆರ್. ಅಂಬೇಡ್ಕರ್‌ರ ಆಶಯದಂತೆ ನಾವು ಕೆಲಸವನ್ನು ಮಾಡುತ್ತಿದ್ದೇವೆ.
ಸವಿತಾ ಸಮಾಜದ ಸಮುದಾಯ ಭವನಕ್ಕೆ ೧೦ ಲಕ್ಷ ರೂ. ಶಾಸಕರ ವಿಶೇಷ ಅನುದಾನದಡಿಯಲ್ಲಿ ನೀಡಲಾಗಿದೆ. ಇದನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ.

ಈ ಅನುದಾನವೂ ಸಾಲದಿದ್ದಲ್ಲಿ ಸಂಸದರಿಂದಲೂ ಇದಕ್ಕೆ ಅನುದಾನವನ್ನು ಕೊಡಿಸುವ ಮೂಲಕ ಕಾಮಗಾರಿ ಪೂರ್ಣಗೊಳಿಸಲಾಗುವುದು. ಈ ಸಮುದಾಯದವರು ಶೈಕ್ಷಣಿಕವಾಗಿ ಮುಂದೆ ಬರಬೇಕು ಈ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಕರೆ ನೀಡಿದರು.


ಪಪಂ ನಾಮ ನಿರ್ದೇಶಿತ ಸದಸ್ಯ ಪಿ.ಸಿ. ಶ್ರೀಕಂಠಸ್ವಾಮಿ ಮಾತನಾಡಿ, ನಮ್ಮ ಸಮುದಾಯ ತಾಲೂಕಿನಲ್ಲಿ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ. ನಮ್ಮನ್ನು ಗುರುತಿಸಿ ಶಾಸಕರು ಪಪಂನಲ್ಲಿ ನಾಮನಿರ್ದೇಶಿತ ಸದಸ್ಯರಾಗಿ ನಮ್ಮನ್ನು ಮಾಡಿರುವುದು ಸಮಾಜಕ್ಕೆ ಸಂದ ಗೌರವವಾಗಿದೆ. ನಮ್ಮ ಸಮುದಾಯ ಭವನದ ಕಾಮಗಾರಿ ಆರಂಭಗೊಂಡು ಅನೇಕ ವರ್ಷಗಳೇ ಕಳೆದಿವೆ. ಆದರೆ ಇದನ್ನು ಪೂರ್ಣಗೊಳಿಸುವಲ್ಲಿ ನಮಗೆ ಅನುದಾನದ ಕೊರತೆ ಇತ್ತು. ಇದನ್ನು ಮನಗಂಡ ಶಾಸಕರು ಇದಕ್ಕೆ ಅನುದಾನ ನೀಡಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ನಮ್ಮ ಸಮಾಜದ ಪರವಾಗಿ ಅವರಿಗೆ ಗೌರವ ಸಮರ್ಪಣೆ ಮಾಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿದರು. ಪಪಂ ಅಧ್ಯಕ್ಷೆ ಲಕ್ಷ್ಮಿಮಲ್ಲು, ಸದಸ್ಯೆ ಸುಶೀಲಾ ನಾಮ ನಿರ್ದೇಶಿತ ಸದಸ್ಯ ಮುನವ್ವರ್ ಬೇಗ್, ಪಿಎಸ್‌ಐ ಹನುಮಂತ ಉಪ್ಪಾರ್, ವೈ.ಕೆ. ಮೋಳೆ ಮಹಾದೇವಶೆಟ್ಟಿ, ಮಲ್ಲು, ರೇವಣ್ಣ, ಕೆ.ಎಂ. ವೀರಶೆಟ್ಟಿ, ರಾಮಣ್ಣ, ಬಸವಣ್ಣ, ರಾಜಶೆಟ್ಟಿ, ನಂಜುಂಡಶೆಟ್ಟಿ, ಗುಂಬಳ್ಳಿ ಬಸವರಾಜು ಸೇರಿದಂತೆ ಅನೇಕರು ಇದ್ದರು.


೧೮೦೧ವೈಎಲ್‌ಡಿಪಿ೦೧ ಯಳಂದೂರು ಪಟ್ಟಣದ ಬಳೇಪೇಟೆಯಲ್ಲಿರುವ ಸವಿತಾ ಸಮಾಜದ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿರವರನ್ನು ಸವಿತಾ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

RELATED ARTICLES
- Advertisment -
Google search engine

Most Popular