Friday, April 18, 2025
Google search engine

Homeರಾಜ್ಯಮನೆ ಕಳೆದುಕೊಂಡವರ ಜೊತೆ ನಮ್ಮ ಸರ್ಕಾರ ನಿಲ್ಲುತ್ತದೆ: ಸಚಿವ ಮಧು ಬಂಗಾರಪ್ಪ ಭರವಸೆ

ಮನೆ ಕಳೆದುಕೊಂಡವರ ಜೊತೆ ನಮ್ಮ ಸರ್ಕಾರ ನಿಲ್ಲುತ್ತದೆ: ಸಚಿವ ಮಧು ಬಂಗಾರಪ್ಪ ಭರವಸೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಅತಿಯಾದ ಮಳೆಯಿಂದ ಹಲವು ಮನೆಗಳು ಹಾಗೂ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಥಳಕ್ಕೆ ಭೇಟಿ ನೀಡಿ ಮನೆ ಕಳೆದುಕೊಂಡವರ ಜೊತೆಗೆ ನಮ್ಮ ಸರ್ಕಾರ ನಿಲ್ಲುತ್ತದೆ ಅವರಿಗೆ ಮನೆ ಕಟ್ಟಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಇಂದು ಭಾನುವಾರ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಅವರು, ಮಳೆಯಿಂದ ಮನೆ ಗೋಡೆ ಕುಸಿದು ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ ೫ ಲಕ್ಷ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು.

ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಮಳೆಯಿಂದ ಹಾನಿಯಾದರೆ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ್ ಸಿ ಇ ಓ ತಹಶೀಲ್ದಾರ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಸಂಪೂರ್ಣ ಕುಸಿದಿದ್ದರೆ ಕಟ್ಟಿಸುವ ಕೆಲಸ ಮಾಡುತ್ತೇವೆ.

ಸರ್ಕಾರದಿಂದ ಈಗ ಒಂದು ಲಕ್ಷ ೨೦,೦೦೦ ಹಣ ನೀಡುತ್ತೇವೆ ಮನೆ ಕಳೆದುಕೊಂಡವರ ಜೊತೆ ನಮ್ಮ ಸರ್ಕಾರ ನಿಲ್ಲುತ್ತದೆ. ಮಳೆಯಿಂದಾಗಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಸಂತ್ರಸ್ತರಿಗಾಗಿ ಈಗಾಗಲೇ ಎರಡು ಕಾಳಜಿ ಕೇಂದ್ರ ತೆರೆಯಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ೧೫೦ ಶಾಲಾ ಕಟ್ಟಡ ದುರಸ್ತಿ ಮಾಡಬೇಕಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

RELATED ARTICLES
- Advertisment -
Google search engine

Most Popular