ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ 40ಕ್ಕೂ ಹೆಚ್ಚು ಕನ್ನಡಿಗರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ವಿಶೇಷ ವಿಮಾನ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಸರ್ಕಾರ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ಕನ್ನಡಿಗ ಆತಂಕ ಪಡಬೇಕಿಲ್ಲ; ಸರ್ಕಾರವು ತಕ್ಷಣದ ಕ್ರಮ ಕೈಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.