Friday, April 25, 2025
Google search engine

Homeರಾಜ್ಯಸುದ್ದಿಜಾಲಪಹಲ್ಗಾಮ್ ಉಗ್ರ ದಾಳಿ ಸಮರ್ಥನೆ: ಫೇಸ್‌ಬುಕ್ ಪೋಸ್ಟ್ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಕೇಸ್ ದಾಖಲು

ಪಹಲ್ಗಾಮ್ ಉಗ್ರ ದಾಳಿ ಸಮರ್ಥನೆ: ಫೇಸ್‌ಬುಕ್ ಪೋಸ್ಟ್ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಕೇಸ್ ದಾಖಲು

ಮಂಗಳೂರು (ದಕ್ಷಿಣ ಕನ್ನಡ): ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಕೇಸ್ ದಾಖಲಾದ ಘಟನೆ ಮಂಗಳೂರಲ್ಲಿ ನಡೆದಿದೆ. ನಿಚ್ಚು ಮಂಗಳೂರು ಹೆಸರಿನ ಫೇಸ್‍ಬುಕ್ ಪೇಜ್‍ ವಿರುದ್ಧ ಉಳ್ಳಾಲದ ಸತೀಶ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ ಕುತ್ತಿಗೆಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ. ಪಾಲ್ಗರ್ ಘಟನೆಯಿಂದಾಗಿ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡಿದ್ದಾನೆ.

ಪೋಸ್ಟ್ ಹಾಕಿದ ನಿಚ್ಚು ಮಂಗಳೂರು ಫೇಸ್‍ಬುಕ್ ಪೇಜ್ ವಿರುದ್ಧ ಉಳ್ಳಾಲದ ಸತೀಶ್ ಕುಮಾರ್ ಎಂಬುವವರು ದೂರು ನೀಡಿದ್ದಾರೆ. ಈ ಸಂಬಂಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬಿಎನ್‍ಎಸ್ ಸೆಕ್ಷನ್ 192 ಮತ್ತು 353 (1) (ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‍ಬುಕ್ ಪೇಜ್ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular