ಪಾಕಿಸ್ತಾನ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಾನುವಾರ ಪ್ರಯಾಣಿಕರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಸ್ ಹವೇಲಿ ಕಹುಟಾದಿಂದ ರಾವಲ್ಪಿಂಡಿಗೆ 30 ಪ್ರಯಾಣಿಕರೊಂದಿಗೆ ಪ್ರಯಾಣಿಸುತ್ತಿತ್ತು, ಪಾನಾ ಸೇತುವೆ ಬಳಿ ಅಪಘಾತ ಸಂಭವಿಸಿದೆ.
ಪರ್ವತ ಪ್ರದೇಶದಲ್ಲಿ ಸಂಭವಿಸಿದ ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ವರದಿ ತಿಳಿಸಿದೆ. ಸ್ಥಳೀಯರು ಬಸ್‌ನಿಂದ ಮೃತದೇಹಗಳನ್ನು ಹೊರತರುತ್ತಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳುತ್ತಿವೆ. ಕಹುತಾ ರಾವಲ್ಪಿಂಡಿ ಜಿಲ್ಲೆಯಲ್ಲಿರುವ ತಹಸಿಲ್ ಆಗಿದೆ ಮತ್ತು ನಗರದಿಂದ ಒಂದು ಗಂಟೆ ದೂರದಲ್ಲಿದೆ.