Thursday, May 8, 2025
Google search engine

HomeUncategorizedರಾಷ್ಟ್ರೀಯಮತ್ತೆ ಗಡಿಯಲ್ಲಿ ಬಾಲ ಬಿಚ್ಚಿದ ಪಾಕಿಸ್ತಾನ : ಪೂಂಚ್ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧ ಹುತಾತ್ಮ

ಮತ್ತೆ ಗಡಿಯಲ್ಲಿ ಬಾಲ ಬಿಚ್ಚಿದ ಪಾಕಿಸ್ತಾನ : ಪೂಂಚ್ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧ ಹುತಾತ್ಮ

ಶ್ರೀನಗರ : ಆಪರೇಷನ್ ಸಿಂಧೂರ್ ಬೆನ್ನಲ್ಲೆ ಗಡಿರೇಖೆಯ (LoC) ಆಚೆಗೆ ಪಾಕಿಸ್ತಾನ ಗುಂಡಿನ ದಾಳಿ ಮುಂದುವರೆಸಿದ್ದರಿಂದ, ಪೂಂಚ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿ 32 ವರ್ಷದ ಲಾನ್ಸ್ ನಾಯಕ್ ದಿನೇಶ್ ಕುಮಾರ್‌ನ ಮೃತಪಟ್ಟಿದ್ದಾರೆ. 5 ಫೀಲ್ಡ್ ರೆಜಿಮೆಂಟ್‌ನ ಲಾನ್ಸ್ ನಾಯಕ್ ದಿನೇಶ್ ಕುಮಾರ್‌ ಹುತಾತ್ಮರಾಗಿದ್ದಾರೆ.

ನಿನ್ನೆ ತಡರಾತ್ರಿ ಆರಂಭವಾದ ಶೆಲ್ ದಾಳಿಯು ಭಾರತದ ಮುಂಚೂಣಿ ಠಾಣೆಗಳು ಮತ್ತು ಹತ್ತಿರದ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದಿದೆ. ಮೋರ್ಟರ್ ಗುಂಡುಗಳು ಮತ್ತು ಫಿರಂಗಿ ಗುಂಡಿನ ದಾಳಿಗಳು ಹಳ್ಳಿಗಳ ಬಳಿ ಅಪಾಯಕಾರಿಯಾಗಿ ಬಿದ್ದವು. ಭಾರತದ ಇತ್ತೀಚಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯವನ್ನು ಸ್ಪಷ್ಟ ಕದನ ವಿರಾಮ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಪ್ರಚೋದನೆ ಎಂದು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ.

ಹುತಾತ್ಮರಾದ 32 ವರ್ಷದ ಜವಾನ್ ದಿನೇಶ್ ಕುಮಾರ್ ಶರ್ಮಾ, ಹರಿಯಾಣದ ಪಲ್ವಾಲ್‌ನ ಮೊಹಮ್ಮದ್‌ಪುರ ಗ್ರಾಮದವರು. ಅವರು ಪಾಕಿಸ್ತಾನದ ಆಕ್ರಮಣಕ್ಕೆ ಆಗಾಗ್ಗೆ ಒಡ್ಡಿಕೊಳ್ಳುವ ಹೈಟೆನ್ಷನ್ ಪ್ರದೇಶವಾದ ಎಲ್‌ಒಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಸಮರ್ಪಣೆ ಮತ್ತು ಶೌರ್ಯ ಅನುಕರಣೀಯ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular