ಹನೂರು: ಕಾಡುಗಳ್ಳ ವೀರಪ್ಪನ್ ಸಹಚರ, ಪಾಲಾರ್ ಬಾಂಬ್ ಸ್ಫೋಟದ ಅಪರಾಧಿ ಜ್ಞಾನಪ್ರಕಾಶ್ (೬೯) ಶುಕ್ರವಾರ ನಿಧನರಾದರು.
ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ವಾಸವಿದ್ದ ಜ್ಞಾನಪ್ರಕಾಶ್ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿ ಗಲ್ಲು ಶಿಕ್ಷೆಗೆ ಒಳಗಾಗಿದ್ದರು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ವಿನವಿ ಸಲ್ಲಿಸಲಾಗಿ ೨೦೧೪ ರಲ್ಲಿ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನನಾಗಿ ಬದಲಿಸಿತ್ತು.
೨೯ ವರ್ಷ ಸೆರೆವಾಸ ಅನುಭವಿಸಿದ್ದ ಜ್ಞಾನಪ್ರಕಾಶ್ ಶ್ವಾಸಕೋಶದ ಕ್ಯಾನ್ಸರ್ ತುತ್ತಾಗಿದ್ದರು. ಮಾನವೀಯತೆ ಆಧಾರದಲ್ಲಿ ೨೦೨೨ ರ ಡಿ.೨೦ ರಂದು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಬಳಿಕ ತಮ್ಮ ಕಡೆಯ ದಿನಗಳನ್ನು ಅವರು ತಮ್ಮ ಮನೆಯಲ್ಲಿ ಕಳೆದಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಈ ಪಾಲಾರ್ ಸ್ಪೋಟಕ್ಕೂ ನನಗೂ ಯಾವುದೇ ಸಂಬಂಧವಿರಲಿಲ್ಲ. ನನ್ನನ್ನು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಸಲಾಗಿತ್ತು ಎಂದು ಹೇಳಿದ್ದರು.
ಜ್ಞಾನಪ್ರಕಾಶ್‌ಗೆ ಪತ್ನಿ, ಒಬ್ಬ ಮಗ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.