Thursday, April 10, 2025
Google search engine

Homeಅಪರಾಧಪಣಂಬೂರು: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ಪಣಂಬೂರು: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿಯನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ, ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್‌ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳಾದ ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಇತರ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್‌ ಬಾಲಾಜಿ ಮತ್ತು ಮುಖೇಶ್‌ ಕುಮಾರ್ ಎಂಬವರನ್ನು ದಸ್ತಗಿರಿ ಮಾಡಿ ಆರೋಪಿಗಳ ವಶದಲ್ಲಿದ್ದ 11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್‌ಗಳನ್ನು ವಶಪಡಿಸಿಕೊಂಡರು.

ವಶಪಡಿಸಿಕೊಂಡ ವಸ್ತುಗಳ ಮೌಲ್ಯ 91,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತರು ಪೈಕಿ ಐದು ಜನ ಮಂಗಳೂರಿನ ನಿವಾಸಿಗಳಾಗಿದ್ದು, ಒಬ್ಬ ಆರೋಪಿ ನೈಜೀರಿಯಾ ದೇಶದವನಾಗಿರುತ್ತಾನೆ. ಆರೋಪಿಗಳೆಲ್ಲರೂ ಕ್ಯಾಟರಿಂಗ್, ಪೈಂಟಿಂಗ್ ಸೇರಿದಂತೆ ಖಾಸಗಿ ಕೆಲಸ ಮಾಡಿಕೊಂಡಿರುವುದಾಗಿದೆ. ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಅರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES
- Advertisment -
Google search engine

Most Popular