Friday, April 18, 2025
Google search engine

Homeರಾಜ್ಯಸುದ್ದಿಜಾಲಪಂಚವಳ್ಳಿ ಗ್ರಾ.ಪಂ: ನೂತನ ಅಧ್ಯಕ್ಷರಾಗಿ ರೂಪಶ್ರೀ ಆನಂದ್, ಉಪಾಧ್ಯಕ್ಷರಾಗಿ ಜ್ಯೋತಿ ದೇವರಾಜ್ ಅವಿರೋಧ ಆಯ್ಕೆ

ಪಂಚವಳ್ಳಿ ಗ್ರಾ.ಪಂ: ನೂತನ ಅಧ್ಯಕ್ಷರಾಗಿ ರೂಪಶ್ರೀ ಆನಂದ್, ಉಪಾಧ್ಯಕ್ಷರಾಗಿ ಜ್ಯೋತಿ ದೇವರಾಜ್ ಅವಿರೋಧ ಆಯ್ಕೆ

ಪಿರಿಯಾಪಟ್ಟಣ: ತಾಲೂಕಿನ ಪಂಚವಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿಗರಾದ ರೂಪಶ್ರೀ ಆನಂದ್ ಉಪಾಧ್ಯಕ್ಷರಾಗಿ ಜ್ಯೋತಿ ದೇವರಾಜ್ ಅವಿರೋಧ ಆಯ್ಕೆಯಾದರು.

ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ರೂಪಶ್ರೀ ಆನಂದ್ ಮತ್ತು ಪರಿಶಿಷ್ಟ ಜಾತಿ ಮಹಿಳೆ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ದೇವರಾಜ್ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿ ಜಿ.ಪಂ ಎಇಇ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆ ಘೋಷಿಸಿದರು, ಫಲಿತಾಂಶ ಬಳಿಕ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಕಾಂಗ್ರೆಸ್ ಪಕ್ಷದ ವರಿಷ್ಠರ ಪರ ಜೈಕಾರ ಕೂಗಿ ಸಂಭ್ರಮಿಸಿದರು.

ತಾ.ಪಂ ಮಾಜಿ ಸದಸ್ಯ ಟಿ.ಈರಯ್ಯ ಮಾತನಾಡಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ರವರ ಅಭಿವೃದ್ಧಿ ಕಾರ್ಯ ಮತ್ತು ಅವರ ಕೈ ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷದ ಬೆಂಬಲಿತ ಎಲ್ಲಾ ಸದಸ್ಯರು ಮತ್ತು ಇತರೆ ಸದಸ್ಯರೆಲ್ಲರೂ ಸೇರಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳನ್ನು ಪರಿಶಿಷ್ಟ ಸಮುದಾಯದ ಮಹಿಳೆಯರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ವಿಚಾರ ಎಂದು ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಎಂ.ಎಸ್ ವೀರಭದ್ರ ಶೆಟ್ಟಿ ಮತ್ತು ಸಿಬ್ಬಂದಿ, ಗ್ರಾ.ಪಂ ಸದಸ್ಯರು ಮುಖಂಡರಾದ ರಫೀಕ್, ಲೋಹಿತ್, ರವಿ, ರಮೇಶ್, ಸಣ್ಣನಂಜಯ್ಯ, ರಾಜಶೇಖರ, ನಹಿಮ್, ನಂದೀಶ್, ದೇವರಾಜು, ಮಹದೇವ್, ಶಿವಣ್ಣ, ತ್ಯಾಗರಾಜು, ಸರ್ದಾರ್ ಪಾಷಾ, ಮುನಾವರ್, ಮಂಜು, ಚನ್ನಪ್ಪ, ಯೋಗೀಶ್, ದೇವರಾಜ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

RELATED ARTICLES
- Advertisment -
Google search engine

Most Popular