Wednesday, December 31, 2025
Google search engine

Homeರಾಜ್ಯಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ : ಎನ್‌.ವೆಂಕಟೇಶಪ್ಪ

ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ : ಎನ್‌.ವೆಂಕಟೇಶಪ್ಪ

ಬಾಗೇಪಲ್ಲಿ: ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ತರಬೇತಿ ಪಡೆದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಪೋಷಕರು ಖಾಸಗಿ ಶಾಲೆಗಳ ವ್ಯ ಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಶಿಕ್ಷಕರು ಹಾಗೂ ಮಕ್ಕಳು ಸ್ವರಚಿತ ಕಥೆ ಕವನಗಳ, ಶಾಲಾ ವಾರ್ಷಿಕೋತ್ಸವ ಸಂಚಿಕೆ ಪ್ರತಿಬಿಂಬ ಪುಸ್ತಕ ಬಿಡುಗಡೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಖಾಸಗಿ ಶಾಲೆಗಳು ಆದ್ದೂರಿಯಾಗಿ ಆಚರಣೆ ಮಾಡುತ್ತವೆ. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು, ಮಕ್ಕಳ ಪೋಷಕರು ಸಹಕಾರ ಪಡೆದು ಆದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವ ಆಚರಣೆ ಮಾಡಿರುವುದು ಶ್ಲಾಘನೀಯ ಎಂದರು.

ಇನ್ನೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಉಚಿತ ಶಿಕ್ಷಣ ಒದಗಿಸುತ್ತಿದೆ. ಅದಲ್ಲದೆ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಕ್ಷೀರಭಾಗ್ಯ ಯೋಜನೆ, ಪೌಷ್ಟಿಕ ಆಹಾರ ವಿತರಣೆ ಮತ್ತಿತರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಇದೆ. ಆದರೂ, ಪೋಷಕರು ಆಂಗ್ಲಭಾಷೆ ಮತ್ತು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹದಿಂದ ಅಧಿಕ ಶುಲ್ಕ ನೀಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಆರ್.ವೆಂಕಟರಾಮ್, ಬಿ.ಆರ್.ಸಿ ಗಳಾದ ಪದ್ಮಾವತಿ, ಮಂಜುನಾಥ, ಮುಖ್ಯ ಶಿಕ್ಷಕ ಶ್ರೀನಿವಾಸ್, ಶಿಕ್ಷಕರಾದ ರಾಮರಾಜು, ವೆಂಕಟೇಶ್ ಬಾಬು, ಲಕ್ಷ್ಮೀ, ಸಲ್ಮಾ ಇಂದುಮತಿ, ಸಮಾಜ ಸೇವಕಿ ಶ್ವೇತಾ ಗಂಜಮ್, ಬಿ.ಎ.ಬಾಬಾಜಾನ್ ಹಾಗೂ ಮಕ್ಕಳು ಪೋಷಕರು ಹಾಜರಿದ್ದರು.

RELATED ARTICLES
- Advertisment -
Google search engine

Most Popular