ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಖಾಸಗಿ ಶಾಲೆಗಳಿಗಿಂತ ಹೆಚ್ಚು ಅನುಕೂಲ ಮತ್ತು ಆಕರ್ಷಣೆ ಸರ್ಕಾರಿ ಶಾಲೆಗಳಲ್ಲಿಯೂ ಇದ್ದು ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರದ ಶಾಲೆಗಳಲ್ಲಿ ಕೊಡಿಸಬೇಕು ಎಂದು ದೊಡ್ಡೇಕೊಪ್ಪಲು ಗ್ರಾ.ಪಂ. ಸದಸ್ಯ ಕೆ.ಪಿ.ಜಗದೀಶ್ ಹೇಳಿದರು.
ಕೆ.ಆರ್.ನಗರ ತಾಲೂಕಿನ ತಾಲೂಕಿನ ಕೆಂಪನಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಶಾಲೆಯಲ್ಲಿ ಗುರುವಾರ ನಡೆದ ೭೮ನೇ ಸ್ವಾತಂತ್ರೊö್ಯÃತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಪೋಷಕರು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲಿಸಬೇಕು ಎಂದರು.
ಸಾವಿರಾರು ಮಂದಿ ಹೋರಾಟಗಾರರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟಿದ್ದು ನಾವೆಲ್ಲರೂ ಅದನ್ನು ಜತನದಿಂದ ಕಾಪಾಡಿಕೊಂಡು ಹೋಗಬೇಕೆಂದು ಅವರು ಸರ್ವಧರ್ಮಗಳ ಸಮನ್ವಯತೆಯ ಬೀಡಾಗಿರುವ ಭಾರತದಲ್ಲಿ ಜನಿಸಿರುವ ನಾವೆಲ್ಲರೂ ಧನ್ಯರು ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆ.ಪಿ.ಜಗದೀಶ್ ಅವರು ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ವೈಯುಕ್ತಿಕ ವೆಚ್ಚದಲ್ಲಿ ಗುರುತಿನ ಚೀಟಿ, ಕಂಠಕೌಪೀನ ಮತ್ತು ಬೆಲ್ಟ್ ಗಳನ್ನು ನೀಡಿದರಲ್ಲದೆ ಮುಂದಿನ ದಿನಗಳಲ್ಲಿ ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಾಲೆಯ ಮುಖ್ಯಶಿಕ್ಷಕಿ ಶೋಭಾ, ಶಿಕ್ಷಕರಾದ ಈಶ್ವರ್, ಮೇಘಾಶ್ರೀ, ನಿವೃತ್ತ ಶಿಕ್ಷಕ ಪ್ರಕಾಶ್, ಬಿಸಿಯೂಟ ತಯಾರಕರಾದ ಪುಷ್ಪಕಲಾ, ಎಸ್‌ಡಿಎಂಸಿ ಅಧ್ಯಕ್ಷೆ ಸಂಧ್ಯಾ ಮತ್ತು ಸದಸ್ಯರು ಇದ್ದರು.