ಪ್ಯಾರಿಸ್: ಒಲಿಂಪಿಕ್ಸ್ ಕುಸ್ತಿಯಲ್ಲಿ ಫೈನಲ್ ತಲುಪಿರುವ ವಿನೇಶಾ ಫೋಗಟ್ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಲಾಗಿದೆ.
ಫೈನಲ್ ನಡೆಯಲಿರುವುದರಿಂದ ಇಂದು ಬೆಳಿಗ್ಗೆ ಆಕೆಯ ದೇಹ ತೂಕ ಪರೀಕ್ಷಿಸುವ ಸಂದರ್ಭ ಆಕೆ ೫೦ ಕೆಜಿಗಿಂತ ೧೦೦ ಗ್ರಾಂ ತೂಕ ಹೆಚ್ಚಿದ್ದಾರೆಂಬುದು ತಿಳಿದು ಬಂದಿದ್ದು, ಅವರು ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ಅವರ ತೂಕದಲ್ಲಿ ೧೦೦ ಗ್ರಾಂವರೆಗೆ ಹೆಚ್ಚಳವಾಗಿದೆ ಎನ್ನಲಾಗಿದೆ.
ನಿನ್ನೆ ನಡೆದ ೫೦ ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಸೆಮಿಫೈನಲ್ ನಲ್ಲಿ ವಿನೇಶಾ ೫೦ ಯಿಂದ ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ವಿರುದ್ಧ ಗೆದ್ದಿದ್ದರು.