ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೇ ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ- ನೈರುತ್ಯ -ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ- ನೈರುತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು ಆರು ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.